ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ನಡೆದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ (Congress) ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಬಿಜೆಪಿ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಹಾಗೂ ರಾಜ್ಯ ಸಹ ಮಾಧ್ಯಮ ಉಸ್ತುವಾರಿ ನರೇಂದ್ರ ಶಿವಾಜಿ ಪಟೇಲ್ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬಲೆ ಹಾಗೂ ಐಟಿ ಮುಖ್ಯಸ್ಥ ಅಭಯ್ ತಿವಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
Advertisement
ಬಿಜೆಪಿ ನಾಯಕರು ನೀಡಿದ ದೂರಿನಲ್ಲಿ, ಕಾಂಗ್ರೆಸ್‌ನ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಮಲ್ ನಾಥ್ ಹಾಗೂ ಇಡೀ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ನೆಪದಲ್ಲಿ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ದೇಶದ ಶಾಂತಿ ಕದಡಲು ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ – ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್
Advertisement
ಇದಕ್ಕೂ ಮುನ್ನ ಶುಕ್ರವಾರ ಜೋಡೋ ಯಾತ್ರೆಯ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ಮಧ್ಯಪ್ರದೇಶದ ಬಿಜೆಪಿ ನಾಯಕ ಲೋಕೇಶ್ ಪರಾಶರ್ ವಿರುದ್ಧ ವಕೀಲ ಅಂಕಿತ್ ಮಿಶ್ರಾ ಹಾಗೂ ಛತ್ತೀಸ್‌ಗಢದ ಕಾಂಗ್ರೆಸ್‌ನ ಪದಾಧಿಕಾರಿಯೊಬ್ಬರು ರಾಯ್‌ಪುರದ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
Advertisement
ನವೆಂಬರ್ 25 ರಂದು ಮಧ್ಯಪ್ರದೇಶದ ಬಿಜೆಪಿ ಮಾಧ್ಯಮ ಉಸ್ತುವಾರಿ ಲೋಕೇಂದ್ರ ಪರಾಶರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಲಾದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗಂಟಲಲ್ಲಿ ಸಿಕ್ಕಿಕೊಂಡ ಚಾಕ್ಲೇಟ್- 9 ವರ್ಷದ ಬಾಲಕ ಉಸಿರುಗಟ್ಟಿ ಸಾವು