ಬೆಂಗಳೂರು: ರಾಜ್ಯಸಭೆ ಚುನಾವಣಾ (Rajya Sabha Election) ವೇಳೆ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣ ನಡೆದು 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್ ಹಾಕಿಲ್ಲ ಯಾಕೆ ಎಂಬ ಪ್ರಶ್ನೆ ಎದ್ದಿದೆ.
ಕಾಂಗ್ರೆಸ್ ಸದಸ್ಯ ನಾಸಿರ್ ಹುಸೇನ್ (Nasir Hussain) ಅವರು ಗೆದ್ದ ಖುಷಿಯಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದರು.ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ನಂತರದ ದಿನಗಳಲ್ಲಿ ಮೂವರು ಆರೋಪಿಗಳು ಜಾಮೀನು ಪಡೆದು ಹೊರಗೆ ಬಂದಿದ್ದರು. ಇದನ್ನೂ ಓದಿ: ಮಣಿಪುರದ ನೂತನ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ನೇಮಕ
ಪೊಲೀಸರು ದೋಷಾರೋಪ ಪಟ್ಟಿಯನ್ನು (Chargesheet) ಸಲ್ಲಿಸಿಲ್ಲ ಅಷ್ಟೇ ಅಲ್ಲದೇ ಇಲ್ಲಿಯವರೆಗೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ.
ನವ ಮಾಸಗಳೇ ಕಳೆದರೂ ಅವರು ಪೊಲೀಸರ ಮುಂದೆ ಹಾಜರಾಗುವ ಸಾಹಸ ಮಾಡಿಲ್ಲ. ಸದ್ಯ ಪೊಲೀಸರು (Police) ಏನು ಮಾಡಲು ಆಗದೇ ಒದ್ದಾಡುತ್ತಿದ್ದಾರೆ. ಪೊಲೀಸರ ಈ ನಡೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.