ಇಸ್ಲಾಮಾಬಾದ್: ಜೈಲಿನಲ್ಲಿರುವ ಪಾಕ್‍ನ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಿತ ಅಭ್ಯರ್ಥಿಗಳು ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಫಲಿತಾಂಶವನ್ನು (Pakistan Election Result 2024) ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರಿಂದ ಪಾಕ್‍ನ ನ್ಯಾಯಾಲಯಗಳು (Court) ಅರ್ಜಿಗಳಿಂದ ತುಂಬಿ ಹೋಗಿವೆ ಎಂದು ವರದಿಯಾಗಿದೆ.
ಚುನಾವಣೆಯಲ್ಲಿ ಅಕ್ರಮವಾಗಿದೆ, ಮತ ಎಣಿಕೆ ವೇಳೆ ಸರಿಯಾದ ಕ್ರಮ ಅನುಸರಿಸಿಲ್ಲ ಎಂದು ಖಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಲಾಹೋರ್ ಹೈಕೋರ್ಟ್‍ನಲ್ಲಿ ಸಲ್ಲಿಸಲಾಗಿದೆ. ಇಬ್ಬರು ಅಭ್ಯರ್ಥಿಗಳು ಫಲಿತಾಂಶಗಳ ವಿರುದ್ಧ ಇಸ್ಲಾಮಾಬಾದ್ ಹೈಕೋರ್ಟ್ ಮತ್ತು ಸಿಂಧ್ ಹೈಕೋರ್ಟ್‍ನಲ್ಲಿ ಕನಿಷ್ಠ ಮೂರು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಲಂಡನ್ ಪ್ಲಾನ್ ವಿಫಲವಾಗಿದೆ- ಫಲಿತಾಂಶ ಘೋಷಣೆಗೂ ಮುನ್ನ ಇಮ್ರಾನ್ ವಿಜಯದ ಭಾಷಣ
Advertisement
Advertisement
ಪಾಕ್ ಚುನಾವಣಾ ಆಯೋಗ, 265 ಕ್ಷೇತ್ರಗಳ ಪೈಕಿ 259 ಸ್ಥಾನಗಳ ಫಲಿತಾಂಶ ಪ್ರಕಟಿಸಿದೆ. ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು 102 ಸ್ಥಾನ ಗೆದ್ದು, ಸಿಂಹಪಾಲನ್ನು ಪಡೆದುಕೊಂಡಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) 74, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳಲ್ಲಿ ಗೆದ್ದಿದೆ. ಪಕ್ಷೇತರರು ಕೆಲ ಸ್ಥಾನಗಳನ್ನು ಗೆದ್ದಿದ್ದಾರೆ.
Advertisement
Advertisement
ಪಾಕಿಸ್ತಾನದ ಪಾರ್ಲಿಮೆಂಟ್ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಮಾಜಿ ಪ್ರಧಾನಿಗಳಾದ ನವಾಜ್ ಷರೀಫ್ ಹಾಗೂ ಇಮ್ರಾನ್ ಖಾನ್ ಇಬ್ಬರೂ ಗೆಲವು ತಮ್ಮದೇ ಎಂದು ಈಗಾಗಲೇ ಘೋಷಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಚುನಾವಣೆ; ಪಿಎಂಎಲ್-ಎನ್ ಅತಿ ದೊಡ್ಡ ಪಕ್ಷ?- ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದ ಮಾಜಿ ಪ್ರಧಾನಿ