ಬಾಲಿವುಡ್ ನಟಿ ಊರ್ವಶಿ ರೌಟೇಲಾ(Urvashi Rautela) ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಪಾಕಿಸ್ತಾನಿ ಬೌಲರ್ ನಸೀಮ್ ಶಾ(Nassem Shah) ಜೊತೆಗೆ ಊರ್ವಶಿ ಹೆಸರು ಸಕತ್ ಸದ್ದು ಮಾಡಿತ್ತು. ಇವರಿಬ್ಬರ ಮಧ್ಯೆ ಪ್ರೀತಿಯಿದೆ ಎಂಬರ್ಥದಲ್ಲಿ ಸಖತ್ ಸುದ್ದಿಯಾಗಿದ್ದರು. ಇದೀಗ ನಸೀಮ್ ಶಾ ಊರ್ವಶಿ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನ ಕೊಟ್ಟಿದ್ದಾರೆ. ಈ ಅಚ್ಚರಿಯ ಹೇಳಿಕೆಯ ಮೂಲಕ ಎಲ್ಲಾ ವದಂತಿಗೂ ಬ್ರೇಕ್ ಹಾಕಿದ್ದಾರೆ.
`ಐರಾವತ’ ನಟಿ ಊರ್ವಶಿ ಇದೀಗ ಚಿತ್ರರಂಗದ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಇತ್ತೀಚೆಗೆ ಪಾಕ್ ಕ್ರಿಕೆಟಿಗ ನಸೀಮ್ ಶಾ ಮತ್ತು ಊರ್ವಶಿ ರೌಟೇಲಾ ಅವರ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ವೀಡಿಯೋದಲ್ಲಿ ಪಾಕಿಸ್ತಾನದ ವೇಗದ ಬೌಲರ್ ನಸೀಮ್ ಶಾ ನಗುತ್ತಿದ್ದು, ಅತೀಫ್ ಅಸ್ಲಾಂ ಅವರ ರೊಮ್ಯಾಂಟಿಕ್ ಹಾಡು ಪ್ಲೇ ಆಗಿತ್ತು. ಈ ಇಬ್ಬರು ಸ್ಟಾರ್‌ಗಳ ನಡುವೆ ಏನೋ ನಡೆಯುತ್ತಿದೆ ಎಂದು ಊಹಿಸಲಾಗಿತ್ತು. ಈಗ ಸ್ವತಃ ನಸೀಮ್ ಅಚ್ಚರಿಯ ಹೇಳಿಕೆಯೊಂದನ್ನ ನೀಡಿದ್ದಾರೆ. ಇದನ್ನೂ ಓದಿ:ಹೆರಿಗೆಯ ನಂತರ ಬದಲಾಯ್ತು ಪ್ರಣಿತಾ ಸುಭಾಷ್ ಲುಕ್
Urvashi Rautela posted a video of herself and Naseem Shah on her Instagram story???????? pic.twitter.com/yH87gzEvH6
— Fatimah (@zkii25) September 6, 2022
ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ನಸೀಮ್ ಶಾ ಭಾಗವಹಿಸಿದ್ದರು. ಈ ವೇಳೆ ಪತ್ರಕರ್ತರೊಬ್ಬರು ಊರ್ವಶಿ ರೌಟೇಲಾ ಶೇರ್ ಮಾಡಿರುವ ವೀಡಿಯೋ ಬಗ್ಗೆ ಕೇಳಿದ್ದಾರೆ. ಅದಕ್ಕೆ ನಸೀಮ್ ಶಾ ಪ್ರತಿಕ್ರಿಯಿಸಿದ್ದು, ಊರ್ವಶಿ ರೌಟೇಲಾ ಯಾರು ಎಂದು ಪ್ರಶ್ನಿಸಿದ್ದಾರೆ. ಊರ್ವಶಿ ಯಾರೆಂಬುದು ನನಗೆ ತಿಳಿದಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಕ್ರಿಕೆಟಿಗ ನಸೀಮ್ ಶಾ, ಊರ್ವಶಿ ಬಗ್ಗೆ ನೀಡಿರುವ ಹೇಳಿಕೆ ಸದ್ಯ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.