ಚಂಡೀಗಢ: ಭಾರತದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ಶೆಲ್ ದಾಳಿಯ ಪರಿಣಾಮ ಫಿರೋಜ್‌ಪುರದಲ್ಲಿ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.ಇದನ್ನೂ ಓದಿ: ಫಿರೋಜ್‌ಪುರದ ಮನೆ ಮೇಲೆ ಪಾಕ್‌ನ ಡ್ರೋನ್ – ಮೂವರಿಗೆ ಗಾಯ, ಓರ್ವ ಗಂಭೀರ
ಪಾಕ್ ನಡೆಸಿದ ದಾಳಿಯ ಪರಿಣಾಮ ಪಂಜಾಬ್‌ನ ಫಿರೋಜ್‌ಪುರದಿಂದ 12ಕಿ.ಮೀ ದೂರದಲ್ಲಿರುವ ಖೈ ಫೆಮೆ ಕಿ ಗ್ರಾಮದ ಮನೆಯೊಂದರ ಮೇಲೆ ಡ್ರೋನ್ ಬಿದ್ದಿದ್ದು, ಭಾರೀ ಸ್ಫೋಟಗೊಂಡಿದೆ. ಪರಿಣಾಮ ಕಾರಿಗೆ ಬೆಂಕಿ ತಗುಲಿದ್ದು, ಮೂವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ದಾಳಿ ವೇಳೆ ಗಾಯಗೊಂಡವರ ಮನೆಯಲ್ಲಿ ದೀಪಗಳು ಉರಿಯುತ್ತಿದ್ದ ಪರಿಣಾಮ ಡ್ರೋನ್ ಉರುಳಿದೆ ಎನ್ನಲಾಗುತ್ತಿದ್ದು, ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ.ಇದನ್ನೂ ಓದಿ: `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿ ಮಿತ್ರರಾಷ್ಟ್ರಗಳ ಬಳಿ ಸಾಲಕ್ಕಾಗಿ ಅಂಗಲಾಚಿದ ಪಾಕ್ – ಟ್ರೋಲ್