ಶ್ರೀನಗರ: ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಶ್ಚಿಮ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಪೊಲೀಸರು ಹಾಗೂ ಭಾರತೀಯ ಸೇನೆ ಎನ್‍ಕೌಂಟರ್ ಮಾಡಿ ಹತ್ಯೆ ಮಾಡಿದೆ.
Advertisement
ಕುಪ್ವಾರದಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಂದ ಕೆಲವೇ ಗಂಟೆಗಳಲ್ಲಿ ಜಲೂರಾ ಪ್ರದೇಶದ ಪಾನಿಪೋರಾ ಅರಣ್ಯದಲ್ಲಿ ಈ ಎನ್‍ಕೌಂಟರ್ ನಡೆದಿದ್ದು, ಸೋಪೋರ್‌ನಲ್ಲಿ ಮೃತಪಟ್ಟ ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಕೇಂದ್ರಾಡಳಿತ ಪ್ರದೇಶದಿಂದ ಪರಾರಿಯಾಗಿರುವ ಇನ್ನೂ ಮೂವರು ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್
Advertisement
J&K | Encounter underway at Chaktaras area of Kupwara. Further details awaited.
(Visuals deferred by unspecified time) pic.twitter.com/gD96dFPh5p
— ANI (@ANI) June 7, 2022
Advertisement
ಹತ್ಯೆಗೀಡಾದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಾಕಿಸ್ತಾನದ ಲಾಹೋರ್‌ನ ಹಂಝಲ್ಲಾ ಎಂದು ಗುರುತಿಸಲಾಗಿದ್ದು, ಆತನ ಬಳಿ ಅವ್ಟೋಮಟ್ ಕಲಾಶ್ನಿಕೋವಾ (ಎಕೆ) ರೈಫಲ್‍ವೊಂದು, ಐದು ಮ್ಯಾಗಜೀನ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ