ಶ್ರೀನಗರ: ಗಡಿ ನಿಯಂತ್ರಣ ರೇಖೆ ದಾಟಿದ ಪಾಕಿಸ್ತಾನಿ ಮಹಿಳೆಯನ್ನು ಭಾರತೀಯ ಸೇನೆ ಬಂಧಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ನಡೆದಿದೆ.
ಪಾಕಿಸ್ತಾನದ ಇಸ್ಲಾಮಾಬಾದ್‍ನ ಫಿರೋಜ್‍ಬಂಡಾ ಪ್ರದೇಶದ ನಿವಾಸಿ ರೋಜಿನಾ (49) ಬಂಧಿತ ಮಹಿಳೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಭಯೋತ್ಪಾದಕ ದಾಳಿಗಳು ನಡೆಯುತ್ತಿವೆ. ಈ ನಡುವೆ ಕೇಂದ್ರಾಡಳಿತ ಪ್ರದೇಶದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಮಹಿಳೆ ರೋಜಿನಾ ಗಡಿ ದಾಟಿ ಭಾರತಕ್ಕೆ ಬಂದಿದ್ದಾಳೆ. ಈ ವಿವಾದಿತ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ದಾಟಿದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ಪಾಕಿಸ್ತಾನಿ ಮಹಿಳೆಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬಿಸಾಡಿದ ಮಚ್ಚು ತೋರಿಸುತ್ತೇನೆಂದು ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗೆ ಗುಂಡೆಟ್ಟು
Advertisement
Advertisement
ಈ ಬಗ್ಗೆ ಅಧಿಕಾರಿಯೊಬ್ಬರು ಮಾತನಾಡಿ, ಪಾಕಿಸ್ತಾನಿ ಮಹಿಳೆ ಪೂಂಚ್‍ನ ಚಕ್ರ ದಾ ಬಾಗ್‍ನಲ್ಲಿ ಎಲ್‍ಒಸಿ ದಾಟಿದ್ದನ್ನು ಭಾರತೀಯ ಸೇನೆ ನೋಡಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಿದ್ದಾರೆ. ಆದರೆ ಅವಳು ಆಕಸ್ಮಿಕವಾಗಿ ಸರಂಧ್ರ ಗಡಿಯನ್ನು ದಾಟಿದ್ದಾಳೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: 3 ಸಾವಿರ ಕೆಜಿ ಪ್ಲಾಸ್ಟಿಕ್‌ನಿಂದ ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಯ್ತು ರಸ್ತೆ – ಏನಿದರ ವಿಶೇಷ?