ನವದೆಹಲಿ: ಪಾಕಿಸ್ತಾನಿ ಮಹಿಳೆಯೊಬ್ಬರು (Pakistani Women), ತಮ್ಮ ಪತಿ ಕರಾಚಿಯಲ್ಲಿ ತನ್ನನ್ನು ಕೈಬಿಟ್ಟು ದೆಹಲಿಯಲ್ಲಿ ರಹಸ್ಯವಾಗಿ ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ನನಗೆ ನ್ಯಾಯ ಕೊಡಿಸಿ ಎಂದು ಪ್ರಧಾನಿ ಮೋದಿ (PM Modi) ಅವರಿಗೆ ಮನವಿ ಮಾಡಿದ್ದಾರೆ.
ನಿಕಿತಾ ನಾಗ್ದೇವ್ ಹೆಸರಿನ ಮಹಿಳೆ, ಪ್ರಧಾನಿ ನರೇಂದ್ರ ಮೋದಿಯವರಿಂದ ನ್ಯಾಯ ಕೋರಿ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ
ಕರಾಚಿ ನಿವಾಸಿ ನಿಕಿತಾ, ದೀರ್ಘಾವಧಿಯ ವೀಸಾದ ಮೇಲೆ ಇಂದೋರ್‌ನಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನಿ ಮೂಲದ ವ್ಯಕ್ತಿ ವಿಕ್ರಮ್ ನಾಗ್ದೇವ್ ಅವರನ್ನು 2020ರ ಜನವರಿ 26 ರಂದು ಕರಾಚಿಯಲ್ಲಿ ಹಿಂದೂ ಪದ್ಧತಿಗಳ ಪ್ರಕಾರ ವಿವಾಹವಾಗಿದರು. ಒಂದು ತಿಂಗಳ ನಂತರ, ವಿಕ್ರಮ್ ಭಾರತಕ್ಕೆ ಬಂದರು. ಅಲ್ಲಿಂದಾಚೆಗೆ ನನ್ನ ಜೀವನವೇ ಹಾಳಾಗಿದೆ ಎಂದು ನಿಕಿತಾ ಆರೋಪಿದ್ದಾರೆ.

ಭಾರತಕ್ಕೆ ಬರಲು ಸಾಕಷ್ಟು ಬಾರಿ ಪ್ರಯತ್ನಿಸಿದೆ. 2020 ರಲ್ಲಿ ವೀಸಾ ವಿಚಾರಕ್ಕಾಗಿ ನನ್ನನ್ನು ಅಟ್ಟಾರಿ ಗಡಿಯಲ್ಲೇ ತಡೆದು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಲಾಯಿತು. ಅಂದಿನಿಂದ, ನನ್ನನ್ನು ಭಾರತಕ್ಕೆ ಕರೆಸಿಕೊಳ್ಳುವಂತೆ ವಿಕ್ರಮ್‌ಗೆ ಮನವಿ ಮಾಡುತ್ತಿದ್ದೇನೆ. ಆದರೆ, ಪ್ರತಿ ಬಾರಿಯೂ ಆತ ನಿರಾಕರಿಸುತ್ತಲೇ ಇದ್ದಾನೆ ಎಂದು ವೀಡಿಯೋದಲ್ಲಿ ಭಾವನಾತ್ಮಕವಾಗಿ ಮಹಿಳೆ ಮಾತನಾಡಿದ್ದಾರೆ.
ಈಗ ನನಗೆ ನ್ಯಾಯ ಸಿಗದಿದ್ದರೆ, ಮಹಿಳೆಯರು ನ್ಯಾಯದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಎಷ್ಟೋ ಹೆಣ್ಣುಮಕ್ಕಳು ವಿವಾಹವಾದ ಬಳಿಕ ಮನೆಗಳಲ್ಲಿ ದೈಹಿಕ ಮತ್ತು ಮಾನಸಿಕ ಕಿರುಕುಳ ಅನುಭವಿಸುತ್ತಿದ್ದಾರೆ. ಎಲ್ಲರೂ ನನ್ನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್ ಮ್ಯಾನೇಜರ್ ಅರೆಸ್ಟ್, ಮಾಲೀಕನ ವಿರುದ್ಧ ವಾರಂಟ್
ಮದುವೆಯಾದ ಹೊಸದರಲ್ಲೇ ನನ್ನ ಬಾಳಲ್ಲಿ ಆಘಾತಕಾರಿ ಘಟನೆಗಳು ನಡೆದಿವೆ. ನಾನು ಪಾಕಿಸ್ತಾನದಿಂದ ಅತ್ತೆಯ ಮನೆಗೆ ಹೋದಾಗ ಅವರ ನಡವಳಿಕೆಯಲ್ಲಿ ಸಂಪೂರ್ಣ ಬದಲಾವಣೆ ಕಂಡಿತು. ನನ್ನ ಗಂಡನಿಗೆ ಬೇರೊಬ್ಬರ ಜೊತೆ ಸಂಬಂಧ ಇರುವುದು ತಿಳಿಯಿತು. ಈ ವಿಚಾರವನ್ನು ಮಾವನಿಗೆ ತಿಳಿಸಿದರೆ, ಹುಡುಗರಿಗೆ ಅಕ್ರಮ ಸಂಬಂಧವಿರುತ್ತದೆ.. ಏನೂ ಮಾಡಲು ಸಾಧ್ಯವಿಲ್ಲ ಅಂತ ಹೇಳ್ತಾರೆ ಎಂದು ನಿಕಿತಾ ವೀಡಿಯೋದಲ್ಲಿ ತಿಳಿಸಿದ್ದಾರೆ.
ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ವಿಕ್ರಮ್ ನನ್ನನ್ನು ಪಾಕಿಸ್ತಾನಕ್ಕೆ ಮರಳುವಂತೆ ಮಾಡಿದ. ಈಗ ಭಾರತಕ್ಕೆ ನಾನು ಬರೋದನ್ನು ನಿರಾಕರಿಸುತ್ತಿದ್ದಾನೆ ಎಂದು ನಿಕಿತಾ ಆರೋಪಿಸಿದ್ದಾರೆ. ಭಾರತದಲ್ಲಿ ಪ್ರತಿಯೊಬ್ಬ ಮಹಿಳೆಗೂ ನ್ಯಾಯ ಸಿಗಬೇಕು” ಎಂದು ಮನವಿ ಮಾಡಿದ್ದಾರೆ.

