ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿ ವಶಕ್ಕೆ ಪಡೆಯಲಾಗಿದ್ದ ಪಾಕಿಸ್ತಾನದ (Pakistan) ಯುವತಿ ಇಕ್ರಾ ಜೀವನಿಯನ್ನು(19) ಬೆಂಗಳೂರು ಪೊಲೀಸರು ಗಡೀಪಾರು (Deportation) ಮಾಡಿದ್ದು ಪಾಕ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಉತ್ತರ ಪ್ರದೇಶದ ಮುಲಾಯಂ ಸಿಂಗ್ (25) ಜೊತೆ ಬೆಂಗಳೂರಿಗೆ ಬಂದಿದ್ದ ಇಕ್ರಾಳನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಸುಪರ್ದಿಗೆ ಒಪ್ಪಿಸಲಾಗಿತ್ತು. ಈಕೆ ಪಾಕ್ ಪ್ರಜೆ ಎಂಬುದು ಸಾಬೀತಾದ ಬಳಿಕ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ (Wagah- Attari Border) ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡೀಪಾರು ಮಾಡಿದ್ದಾರೆ.
Advertisement
Advertisement
ಗೆಳೆಯನಿಗಾಗಿ ಕಾಯುತ್ತೇನೆ:
ಗೆಳೆಯನಿಗಾಗಿ ನಾನು ದೇಶವನ್ನು ತೊರೆದು ಭಾರತಕ್ಕೆ ಬಂದಿದ್ದೆ. ನಾನು ಯಾವುದೇ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಲ್ಲ. ಮುಲಾಯಂ ಸಿಂಗ್ ಯಾದವ್‌ಗಾಗಿ ಕೊನೆಯವರೆಗೆ ಕಾಯುತ್ತೇನೆ. ಜೈಲಿನಿಂದ ಬಿಡುಗಡೆಯಾದ ಬಳಿಕ ನನ್ನನ್ನು ಕರೆದುಕೊಂಡು ಹೋಗಲು ಆತನಿಗೆ ಹೇಳಿ ಎಂದು ಇಕ್ರಾ ಪೊಲೀಸರಲ್ಲಿ ಮನವಿ ಮಾಡಿದ್ದಾಳೆ. ಇದನ್ನೂ ಓದಿ: ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು – ನಮ್ಮ ದೇಶ ದಿವಾಳಿಯಾಗಿದೆ ಎಂದ ರಕ್ಷಣಾ ಸಚಿವ
Advertisement
ಏನಿದು ಪ್ರಕರಣ?
ಮುಲಾಯಂ ಸಿಂಗ್ ಯಾದವ್ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ (Bengaluru) ಬೇರೆ ಬೇರೆ ಕಂಪನಿಗಳಲ್ಲಿ ಸೆಕ್ಯೂರಿಟಿ ಗಾರ್ಡ್ (Security Guard) ಆಗಿ ಕೆಲಸ ಮಾಡಿಕೊಂಡಿದ್ದ. ಈತನಿಗೆ ಆನ್‌ಲೈನ್‌ನಲ್ಲಿ ಲೂಡೋ ಆಡುವ ಹವ್ಯಾಸವಿತ್ತು. ಈ ಆಟದ ಸಮಯದಲ್ಲೇ ಪಾಕ್ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದರು.
Advertisement
ಗೆಳತಿ ಪಾಕಿಸ್ತಾನದಲ್ಲಿರುವ ಕಾರಣ ನೇರವಾಗಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನು ಅರಿತ ಆತ ಕರಾಚಿಯಿಂದ ದುಬೈಗೆ, ದುಬೈಯಿಂದ ನೇಪಾಳದ ಕಠ್ಮಂಡುಗೆ ಕರೆಸಿಕೊಂಡಿದ್ದಾನೆ. ನೇಪಾಳದಲ್ಲಿ ಇಬ್ಬರು ಮದುವೆಯಾಗಿದ್ದು ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಬಿಹಾರದ ಗಡಿ ಪ್ರವೇಶಿಸಿ ಪಾಟ್ನಾಗೆ ಬಂದಿದ್ದಾರೆ. ಬಳಿಕ ರೈಲಿನಲ್ಲಿ ಬೆಂಗಳೂರಿಗೆ ಆಗಮಿಸಿ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಜುನ್ನಸಂದ್ರದಲ್ಲಿ ನೆಲೆಸಿದ್ದರು.
ಕರೆಯಿಂದ ಪತ್ತೆ
ಇಕ್ರಾ ಜೀವನಿ ಪಾಕಿಸ್ತಾನದಲ್ಲಿರುವ ತಾಯಿ ಜೊತೆ ಮಾತನಾಡಲು ಕರೆ ಮಾಡುತ್ತಿದ್ದಳು. ಈ ವಿಷಯ ತಿಳಿದು ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಿತ್ತು. ಈ ಆಧಾರದಲ್ಲಿ ಪೊಲೀಸರು ಮುಲಾಯಂನನ್ನು ಬಂಧಿಸಿ ಇಕ್ರಾಳನ್ನು ಎಫ್‌ಆರ್‌ಆರ್‌ಒ ಸುಪರ್ದಿಗೆ ಒಪ್ಪಿಸಲಾಗಿತ್ತು. ಇಕ್ರಾ ಜೀವನಿ ಮೇಲೆ ಯಾವುದೇ ದೂರು ದಾಖಲಾಗಿಲ್ಲ. ಇಕ್ರಾಳನ್ನು ಅಕ್ರಮವಾಗಿ ಗಡಿದಾಟಿಸಿ ತಂದ ತಪ್ಪಿಗೆ ಮುಲಾಯಂ ಸಿಂಗ್ ಯಾದವ್ ಮೇಲೆ ವಿದೇಶಿ ಕಾಯ್ದೆಯ ಅಡಿಯಲ್ಲಿ ದೇಶದ ಭದ್ರತೆಗೆ ಅಪಾಯದ ತಂದ ಗಂಭೀರ ಸ್ವರೂಪದ ಆರೋಪ ಹೊರಿಸಿ ಜೈಲಿಗೆ ಕಳುಹಿಸಲಾಗಿದೆ.
ತನಿಖೆಯ ವೇಳೆ ಈಕೆ ರವಾ ಯಾದವ್ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದ ವಿಚಾರ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಆ ಹೆಸರಿನಲ್ಲೇ ಪಾಸ್‌ಪೋರ್ಟ್ ಪಡೆಯಲು ಅರ್ಜಿ ಹಾಕಿದ್ದ ವಿಷಯವು ಬಯಲಾಗಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k