ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟಿವಿ ಚರ್ಚೆಯಲ್ಲಿ ಪಾಲ್ಗೊಳ್ಳಲು ನಾನು ಸಿದ್ಧ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಆಹ್ವಾನ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನವು 75 ವರ್ಷಗಳ ಹಿಂದೆ ಸ್ವಾತಂತ್ರ್ಯ ಗಳಿಸಿದ ನಂತರ ಪರಸ್ಪರ ಮೂರು ಯುದ್ಧಗಳನ್ನು ನಡೆಸಿವೆ. ಈ ಹದಗೆಟ್ಟ ಸಂಬಂಧದ ಬಗ್ಗೆ ಚರ್ಚೆ ನಡೆಸಿ ಪರಿಹರಿಸಿಕೊಳ್ಳುವ ಆಶಯವನ್ನು ಇಮ್ರಾನ್ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದಿಂದ ಮುಂದಿನ 25 ವರ್ಷಗಳ ಅಭಿವೃದ್ಧಿಗೆ ಅಡಿಪಾಯ: ನರೇಂದ್ರ ಮೋದಿ
ಟಿವಿಯಲ್ಲಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಲು ನನಗೆ ತುಂಬಾ ಇಷ್ಟ ಎಂದು ಸಂದರ್ಶನವೊಂದರಲ್ಲಿ ಇಮ್ರಾನ್ ತಿಳಿಸಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಚರ್ಚೆಯ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಾದರೆ, ಭಾರತ ಉಪಖಂಡದ ಕೋಟ್ಯಂತರ ಜನರಿಗೆ ಪ್ರಯೋಜನಕಾರಿಯಾಗಬಹುದು ಎಂದಿದ್ದಾರೆ.
ಭಾರತವು ಪ್ರತಿಕೂಲ ದೇಶವಾಗಿದೆ. ಹೀಗಾಗಿ ಅದರೊಂದಿಗೆ ವ್ಯಾಪಾರ ವಹಿವಾಟು ಕಡಿಮೆಯಾಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಇದನ್ನೂ ಓದಿ: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ – ಈಶ್ವರಪ್ಪ ಹೇಳಿಕೆಗೆ ಜೆ.ಪಿ ನಡ್ಡಾ ಛೀಮಾರಿ
ಈಚೆಗೆ ಭಾರತವು ಪಾಕಿಸ್ತಾನಕ್ಕೆ ʼಭಯೋತ್ಪಾದನೆ ಮತ್ತು ಮಾತುಕತೆಗೆ ಕೈಜೋಡಿಸಲು ಸಾಧ್ಯವಿಲ್ಲʼ ಎಂದು ಸ್ಪಷ್ಟಪಡಿಸಿದೆ. ಭಯೋತ್ಪಾದಕ ಗುಂಪುಗಳನ್ನು ಹತ್ತಿಕ್ಕಲು ಮತ್ತು ಭಯೋತ್ಪಾದಕರನ್ನು ಶಿಕ್ಷಿಸುವಂತೆ ಪಾಕಿಸ್ತಾನವನ್ನು ಒತ್ತಾಯಿಸಿದೆ.