ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನದ ಪಂಜಾಬ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿದೆ. ಅತ್ಯಾಚಾರ ಪ್ರಕರಣಗಳನ್ನು ಹತೋಟಿಗೆ ತರಲು ತುರ್ತು ಪರಿಸ್ಥಿತಿಯನ್ನು ಘೋಷಿಸಲು ಆಡಳಿತವನ್ನು ಒತ್ತಾಯಿಸಲಾಗಿದೆ ಎಂದು ಪಂಜಾಬ್ ಗೃಹ ಸಚಿವ ಅಟ್ಟ ತರಾರ್ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ – ಬಿಜೆಪಿಯ ಐವರು ಆಯ್ಕೆ
Advertisement
Advertisement
ಪಂಜಾಬ್‌ನಲ್ಲಿ ಪ್ರತಿದಿನ 4-5 ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಲೈಂಗಿಕ ಕಿರುಕುಳ, ನಿಂದನೆ ಮತ್ತು ಬಲವಂತದ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಪರಿಗಣಿಸುತ್ತಿದೆ ಎಂದು ಪ್ರಾಂತೀಯ ಸಚಿವರು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪ್ರಧಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
Advertisement
ಕಾನೂನು ಸಚಿವ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ ಅವರ ಸಮ್ಮುಖದಲ್ಲಿ ಸಚಿವರು, ಎಲ್ಲಾ ಪ್ರಕರಣಗಳನ್ನು ಅತ್ಯಾಚಾರ ಮತ್ತು ಕಾನೂನು ಹಾಗೂ ಸುವ್ಯವಸ್ಥೆಯ ಕ್ಯಾಬಿನೆಟ್ ಸಮಿತಿ ಪರಿಶೀಲಿಸುತ್ತದೆ. ಅಂತಹ ಘಟನೆಗಳ ಮೇಲೆ ನಿಗಾ ಇರಿಸಿ ನಾಗರಿಕ ಸಮಾಜ, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರನ್ನು ಸಹ ಸಮಾಲೋಚಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ
Advertisement
ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವದ ಬಗ್ಗೆ ಕಲಿಸಬೇಕು, ಮೇಲ್ವಿಚಾರಣೆಯಿಲ್ಲದೆ ಯುವಕರು ತಮ್ಮ ಮನೆಗಳಲ್ಲಿ ಒಂಟಿಯಾಗಿರಬಾರದು ಎಂದು ತಾರಾರ್ ಒತ್ತಾಯಿಸಿದರು.
ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರ ಅತ್ಯಾಚಾರ ವಿರೋಧಿ ಅಭಿಯಾನವನ್ನು ಪ್ರಾರಂಭಿಸಿದೆ ಹಾಗೂ ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಹಾಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.