ರಾಜ್ಯ ಸರ್ಕಾರಕ್ಕೆ ಹಿನ್ನಡೆ – ರಾಜಮನೆತನಕ್ಕೆ 3,400 ಕೋಟಿಯ ಟಿಡಿಆರ್ ನೀಡಲು ಸುಪ್ರೀಂ ಆದೇಶ

Public TV
1 Min Read
pramoda devi wadiyar

ನವದೆಹಲಿ: ಅರಮನೆ ಮೈದಾನ (Palace Ground) ಭೂಮಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3,400 ಕೋಟಿಯ ಟಿಡಿಆರ್ (TDR) ಅನ್ನು ಮೈಸೂರು ರಾಜಮನೆತನಕ್ಕೆ ನೀಡಲು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ.

ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ 3,400 ಕೋಟಿಯ ಟಿಡಿಆರ್ (ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು) ಅನ್ನು ಈ ಕೂಡಲೇ ನೀಡಬೇಕು ಎಂದು ಸುಪ್ರೀಂ ಸೂಚಿಸಿದೆ. ಇದನ್ನೂ ಓದಿ: ಜ್ಯೋತಿಗೆ ಒಡಿಶಾ ಲಿಂಕ್ – ‘ಪಾಕ್‌ನಲ್ಲಿ ಒಡಿಶಾ ಹುಡುಗಿ’ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿಚಾರಣೆ

supreme Court 1

ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡಬೇಕು ಎಂದು ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ನಲ್ಲಿ 3,400 ಕೋಟಿಯ ಟಿಡಿಆರ್ ಅನ್ನು ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಅದನ್ನು ರಾಜವಂಶಸ್ಥರಿಗೆ ಹಸ್ತಾಂತರಿಸಬಾರದು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್‌ನಲ್ಲಿ ಟಿಡಿಆರ್ ಇಡಲಾಗಿತ್ತು. ಇದನ್ನು ರಾಜಮನೆತನ ಪರ ವಕೀಲರು ವಿರೋಧಿಸಿದ್ದರು. ರಿಜಿಸ್ಟ್ರಾರ್‌ನಲ್ಲಿ ಇರಬೇಕು ಎಂದು ಸರ್ಕಾರ ವಾದಿಸಿತ್ತು. ಈಗ ಅಂತಿಮವಾಗಿ ರಾಜ್ಯ ಮನೆತನಕ್ಕೆ ಟಿಡಿಆರ್ ನೀಡಲು ಸೂಚಿಸಲಾಗಿದೆ. ಇದನ್ನೂ ಓದಿ: ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ಈ ಭೂಮಿಯ ಮೇಲೆ ರಾಜಮನೆತನದ ಹಕ್ಕಿಲ್ಲ ಎನ್ನುವ ರಾಜ್ಯ ಸರ್ಕಾರದ ಅರ್ಜಿ ಇನ್ನೂ ಬಾಕಿ ಇದೆ. ಅಂತಿಮ ಆದೇಶಕ್ಕೆ ಒಳಪಟ್ಟು ಟಿಡಿಆರ್ ಸ್ವೀಕರಿಸಲು ಸೂಚನೆ ನೀಡಲಾಗಿದೆ.

Share This Article