ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ (Ankola) ಪಟ್ಟಣದಲ್ಲಿ ಈದ್ ಮಿಲಾದ್ (Eid-e-Milad) ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು (Palestine Flag) ಪ್ರದರ್ಶಿಸಿದ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು ವಶಕ್ಕೆ ಪಡೆದು ಮುನ್ನೆಚ್ಚರಿಕೆ ನೀಡಿದ್ದಾರೆ. ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಪರಿಸ್ಥಿತಿಯನ್ನು ತಿಳಿಗೊಳಿಸಿದ ಪೊಲೀಸರು, ಇಂತಹ ಧ್ವಜಗಳನ್ನು ಹಾರಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು. ಇದನ್ನೂ ಓದಿ: ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಕಾರು – 6 ಮಂದಿ ಸಾವು, ಮೂವರಿಗೆ ಗಾಯ
ಇನ್ನು ಇತ್ತ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದಲ್ಲಿ ಇರಾನ್ ದೇಶದ ಧ್ವಜ ಹಾರಾಡಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಧ್ವಜ ಹಾರಾಟದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪೊಲೀಸರು ಹಾಗೂ ಸ್ಥಳೀಯರು ಧ್ವಜ ತೆರವುಗೊಳಿಸಿದ್ದಾರೆ. ಇದನ್ನೂ ಓದಿ: Shivamogga | ತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು
