ನವದೆಹಲಿ: ಕಳೆದ ಮೂರು ದಿನಗಳಿಂದ ಗೃಹ ಸಚಿವಾಲಯದ (MHA) ಅಧಿಕಾರಿಗಳು ಸಭೆ ನಡೆಸಿ ಪ್ರತ್ಯೇಕ ಕಂಟ್ರೋಲ್ ರೂಮ್ (Control Room) ತೆರೆದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿಎಫ್‌ಐ ಮೇಲೆ ದಾಳಿ ನಡೆಸಿದೆ. ಇಲ್ಲಿಯವರೆಗೆ ಕೆಲ ಜಾಗಗಳಲ್ಲಿ ಎನ್‌ಐಎ (NIA) ದಾಳಿ ನಡೆಸಿದ್ದರೆ, ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಇಡಿ ಜೊತೆ ಸೇರಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.
Advertisement
ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಿಎಫ್‌ಐ (PFI) ಭಾಗಿಯಾಗಿದೆ ಎಂಬ ಆರೋಪ ಈ ಕೇಳಿ ಬಂದಿತ್ತು. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಪಕ್ಷಗಳು ಎಸ್‌ಡಿಪಿಐ (SDPI), ಪಿಎಫ್‌ಐ ನಿಷೇಧಿಸುವಂತೆ ಆಗ್ರಹಿಸಿದ್ದವು. ಇಲ್ಲಿಯವರೆಗೆ ಕೇಂದ್ರ ಸರ್ಕಾರ (Central Government) ಯಾವುದೇ ಕಠಿಣ ಕ್ರಮವನ್ನು ಕೈಗೊಂಡಿರಲಿಲ್ಲ. ಹತ್ಯೆಯಾದ ಸಂದರ್ಭದಲ್ಲಿ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಸರಿಯಾದ ಪ್ಲ್ಯಾನ್ ಮಾಡಿಕೊಂಡೇ ದೇಶಾದ್ಯಂತ ಪಿಎಫ್‌ಐ ನಾಯಕರ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: SDPI, PFI ಮೇಲೆ NIA, ED ದಾಳಿ – ಕರ್ನಾಟಕದಲ್ಲಿ 20, ದೇಶಾದ್ಯಂತ 106 ಮಂದಿ ಅರೆಸ್ಟ್
Advertisement
Advertisement
ಏನಿದು ಸಭೆಯ ರಹಸ್ಯ?
ಮೂರು ದಿನಗಳ ಹಿಂದೆಯಷ್ಟೇ ಇಡಿ, ಎನ್‌ಐಎ ಹಾಗೂ ಗುಪ್ತಚರ ಇಲಾಖೆ (Intelligence Bureau) ಅಧಿಕಾರಿಗಳೊಂದಿಗೆ ಗೃಹ ಸಚಿವಾಲಯವು ಸಭೆ ನಡೆಸಿದೆ. ಇಲ್ಲಿಯವರೆಗೆ ಯಾವೆಲ್ಲ ಪ್ರಕರಣ ದಾಖಲಾಗಿದೆ? ಈ ಸಂಘಟನೆಗೆ ಹಣ ಎಲ್ಲಿಂದ ಬರುತ್ತಿದೆ ಈ ಎಲ್ಲಾ ವಿಚಾರಗಳನ್ನು ಮಾಹಿತಿ ಕಲೆ ಹಾಕಿ ಚರ್ಚೆ ನಡೆಸಲಾಗಿತ್ತು. ಅದಕ್ಕಾಗಿ 6 ಕಂಟ್ರೋಲ್ ರೂಂಗಳನ್ನು ತೆರಲಾಗಿತ್ತು. ಪ್ರತಿ ರಾಜ್ಯದಲ್ಲಿರುವ ನಾಯಕರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಸಭೆ ನಡೆದ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು. ಪಿಎಫ್‌ಐ ಕಾರ್ಯಕರ್ತರು (PFI Workers) ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಬಹುತೇಕ ಕಡೆ ರಾತ್ರಿಯೇ ಕಾರ್ಯಚರಣೆ ನಡೆಸಿ ನಾಯಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ
Advertisement
ಆರೋಪ ಏನು?
ಪಶ್ಚಿಮ ಏಷ್ಯಾದ ದೇಶಗಳಾದ ಕತಾರ್, ಕುವೈತ್, ಸೌದಿ ಅರೇಬಿಯಾ, ಟರ್ಕಿಯಿಂದ ಈ ಸಂಘಟನೆಗಳಿಗೆ ಅಕ್ರಮವಾಗಿ ಹಣ ಬರುತ್ತಿದೆ ಎನ್ನವ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಭಾರತದಲ್ಲಿ ಯುವಕರ ತಲೆ ಕೆಡಿಸಿ ಭಯೋತ್ಪಾದಕ ಕೃತ್ಯ ಎಸಗಲು ಈ ಸಂಘಟನೆಗಳು ಪ್ರೋತ್ಸಾಹ ನೀಡುತ್ತಿವೆ. ವಿದೇಶದಿಂದ ಬಂದ ನಿಧಿಯನ್ನು ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳಿಗೆ ಮಾತ್ರವಲ್ಲದೆ ಯುವಕರಲ್ಲಿ ಮತಾಂಧತೆಯನ್ನು ಬೆಳೆಸಲು ಬಳಸಲಾಗುತ್ತಿದೆ. ಈ ಸಂಘಟನೆಯು ಮುಸ್ಲಿಂ ಸಹೋದರತ್ವ ಹೊಂದಿರುವಂತಹ ಪ್ಯಾನ್-ಇಸ್ಲಾಮಿಸ್ಟ್ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದೆ.
ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶದ ಮಾಜಿ ಡಿಜಿಪಿ (DGP) ಬ್ರಿಜ್‌ಲಾಲ್, ಪಿಎಫ್‌ಐ ಅಪಾಯಕಾರಿ ಸಂಘಟನೆಯಾಗಿದ್ದು, ದೇಶದ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಜೊತೆಗೆ ನೇರವಾಗಿ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿದೆ. ಈ ಸಂಘಟನೆಯ ಸದಸ್ಯರು ಭಾರತೀಯ ಮುಜಾಹಿದ್ದೀನ್‌ನೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ದೇಶದಲ್ಲಿ ಅನೇಕ ದೊಡ್ಡ ಸ್ಫೋಟಗಳನ್ನು ನಡೆಸಲು ಇವರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: NIA ದಾಳಿ: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ
ಭಾರತದಲ್ಲಿ ನಿಷೇಧಕ್ಕೆ ಒಳಗಾಗಿರುವ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(SIMI) ನಾಯಕರೇ ಪಿಎಫ್‌ಐ- ಎಸ್‌ಡಿಪಿಐ ಸಂಘಟನೆಯ ಪ್ರಮುಖ ನಾಯಕರಾಗಿದ್ದಾರೆ. ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದೇ ಇವರ ಮುಖ್ಯ ಉದ್ದೇಶ.
ಸದ್ಯ ಭಾರತದಲ್ಲಿರುವ ಶಿಯಾ, ಸುನ್ನಿ, ಸೂಫಿ, ದಿಯೋಬಂದ್ ಪಂಗಡದ ನಾಯಕರು ಪಿಎಫ್‌ಐ ಹಾಗೂ ಎಸ್‌ಡಿಪಿಐನಲ್ಲಿದ್ದಾರೆ.