– ಆರೋಗ್ಯ ಇಲಾಖೆ ವಿರುದ್ಧ ಶಾಸಕರ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಬ್ಯಾನ್ ವಿವಾದ ಭಾರೀ ಸದ್ದು ಮಾಡುತ್ತಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಶಾಸಕರು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಭೇಟಿ ಮಾಡಿದ ಶಾಸಕರಿಗೆ ಗುಟ್ಕಾ ಬ್ಯಾನ್ ನಿಷೇಧ ವಾಪಸ್ ಪಡೆಯುವ ಭರವಸೆ ನೀಡಿದ್ದಾರೆ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಬ್ಯಾನ್ ಅಸ್ತ್ರ ಪ್ರಯೋಗ ಮಾಡಿತ್ತು. ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಅದೇಶ ಹೊರಡಿಸಲಾಗಿತ್ತು. ಆಹಾರ ಸುರಕ್ಷತಾ ಅಧಿಕಾರಿಗಳಿಂದ ವಿಶೇಷ ತಪಾಸಣೆಗಳು ನಡೆಯಲಿದ್ದು, ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಲು ಮತ್ತು ಅಕ್ರಮ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಆರೋಗ್ಯ ಇಲಾಖೆ ಕೋರಿತ್ತು. ಈ ಆದೇಶದದಿಂದ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದು, ಸರ್ಕಾರದ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅಡಿಕೆ ಬೆಳೆಯುವ ಪ್ರದೇಶಗಳ ಶಾಸಕರು ಸಿಎಂ ಭೇಟಿಯಾಗಿ ಗುಟ್ಕಾ ಬ್ಯಾನ್ ವಾಪಸ್ ಪಡೆಯವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಏಕಾಏಕಿ ಆದೇಶ ಮಾಡಿದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಶಾಸಕರಾದ ಬಸವರಾಜ ಶಿವಗಂಗಾ, ಎ.ಮಂಜು, ಅರಗ ಜ್ಞಾನೇಂದ್ರ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಆದೇಶ ವಾಪಸ್ ಪಡೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಶೀಘ್ರವೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಪ್ರಕಾರ 2026ರ ಆಗಸ್ಟ್ 10 ರಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿತ್ತು.. ಅಧಿಸೂಚನೆ ಹೊರಬಿದ್ದ ದಿನಾಂಕದಿಂದ ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ಗುಟ್ಕಾ ಬ್ಯಾನ್ ಮಾಡಲಾಗಿತ್ತು. ಗುಟ್ಕಾ, ಪಾನ್ ಮಸಾಲಾ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಇತರೆ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ/ಸಾಗಾಣಿಕೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗುಟ್ಕಾ ಕಂಪನಿಗಳ ಜೊತೆ ವ್ಯವಹಾರ ಕುದುರಿಸಲು ಬ್ಯಾನ್ ಮಾಡಿದ್ದಾರೆಂದು ಸಿ.ಟಿ.ರವಿ ಆರೋಪಿಸಿದ್ದಾರೆ. ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಹೆಚ್ಚು ಅಡಿಕೆ ಬೆಳೆಯುತ್ತಾರೆ, ಅಡಿಕೆ ಬೆಳೆಗಾರರ ಮೇಲೆ ಗದಪ್ರಹಾರ ಮಾಡಲು ಸರ್ಕಾರ ಹೊರಟಿದ್ದು, ಬ್ಯಾನ್ ವಾಪಸ್ ಪಡೆಯಬೇಕೆಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಒಟ್ನಲ್ಲಿ ಒಟ್ಟು 9 ಲಕ್ಷದ 49 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯುತ್ತಿದ್ದು, ಇಡೀ ದೇಶದಲ್ಲೇ 76% ರಷ್ಟು ಅಡಿಕೆ ನಮ್ಮ ರಾಜ್ಯದಲ್ಲಿ ಬೆಳೆಯುತ್ತಾರೆ. ಏಕಾಏಕಿ ಗುಟ್ಕಾ ನಿಷೇಧ ಆತಂಕಯೊಡ್ಡಿದ್ದು, ನಿಷೇಧ ವಾಪಸ್ ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಶಾಲೆ, ಸರ್ಕಾರಿ ಜಾಗಗಳಲ್ಲಿ ಅನುಮತಿ ಕಡ್ಡಾಯ – ಆರ್‌ಎಸ್‌ಎಸ್ ಕಾರ್ಯಕ್ರಮಗಳಿಗೆ ಸರ್ಕಾರ ಅಂಕುಶ?

