ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ನಡೆಯುತ್ತಿರುವ ಹೋರಾಟ ಇಂದು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದು, ಸರ್ಕಾರ ಕೊಟ್ಟ ಮಾತಿನಂತೆ ನಡೆಯದಿದ್ದರೇ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Advertisement
ಈ ಬಗ್ಗೆ ಮಾತನಾಡಿದ ಕಾಶಪ್ಪನವರ್, ಸಿಎಂ ಬೊಮ್ಮಾಯಿಯವರು ಮೀಸಲಾತಿ ನೀಡಿದರೆ ಅವರಿಗೂ ಗೌರವ, ನಮಗೂ ಗೌರವ. ಹೋರಾಟ ಬೆಂಗಳೂರು ತಲುಪುವ ಮುನ್ನ ಸರ್ಕಾರದಿಂದ ಸ್ಪಷ್ಟ ಉತ್ತರ ದೊರೆಯಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪರಿಂದ ನಿರಾಣಿಗೆ ಸಿಎಂ ಸ್ಥಾನ ಕೈತಪ್ಪಿದೆ, ಯತ್ನಾಳ್ ಬಾಹುಬಲಿ: ಜಯಮೃತ್ಯುಂಜಯ ಸ್ವಾಮೀಜಿ
Advertisement
Advertisement
ಸಮಾವೇಶಕ್ಕೂ ಮುನ್ನ ಸಮುದಾಯದ ಬಾಂಧವರು ಚೆನ್ನಮ್ಮ ವೃತ್ತದಿಂದ ಬೈಕ್ ರ‍್ಯಾಲಿ ನಡೆಸಿದರು. ಚೆನ್ನಮ್ಮನ ಪ್ರತಿಮೆಗೆ ಮಾರ್ಲಾಪಣೆ ಮಾಡಿ ರ‍್ಯಾಲಿ ಆರಂಭಿಸಿದರು. ಪಂಚಮಸಾಲಿ ಪೀಠದ ಜಯಮೃತ್ಯುಂಜಯ್ಯ ಸ್ವಾಮೀಜಿ. ಶಾಸಕ ಅರವಿಂದ ಬೆಲ್ಲದ್. ಮಾಜಿ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ರ‍್ಯಾಲಿ ನಡೆಯಿತು. ಈ ವೇಳೆ ಮಾತನಾಡಿದ ಜಯ ಮೃತ್ಯುಂಜಯ್ಯ ಸ್ವಾಮೀಜಿ, ಸಪ್ಟೆಂಬರ್ 15 ರೊಳಗೆ ಮೀಸಲಾತಿ ನೀಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಈಗ ಕಾಲಾವಕಾಶ ಮೀರಿದೆ. ನಮ್ಮಹೋರಾಟ 31ನೇ ದಿನಕ್ಕೆ ಕಾಲಿರಿಸಿದೆ, ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ನೀಡುತ್ತಾರೆ ಎನ್ನುವ ನಂಬಿಕೆ ಇದೆ, ಸದನದಲ್ಲೂ ನಮಗೆ ಸರಿಯಾಗಿ ಉತ್ತರ ನೀಡಿಲ್ಲ, ನನ್ನ ಜೊತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ, ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
Advertisement
ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿ, ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ನಾನು ಸದನದ ಬಾವಿಯೊಳಗೆ ಇಳಿದು ಹೋರಾಟ ಮಾಡಿದ್ದೇವೆ, ನಮ್ಮ ಹೋರಾಟದ ವೇಳೆ ಸ್ಪಷ್ಟ ಉತ್ತರ ಸಿಕ್ಕಿಲ್ಲ, ಸಿಎಂ ನಮಗೆ ನ್ಯಾಯ ಕೊಡುತ್ತಾರೆ ಎನ್ನುವ ನಂಬಿಕೆ ಇದೆ. ಆಯೋಗದ ವರದಿ ಬೇಗ ತರಿಸಿಕೊಂಡು ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಗದ್ದೆಗೆ ಹೋಗೋ ನೆನಪದಲ್ಲಿ ಬಾವಿಗೆ ತಳ್ಳಿ ಹೆಂಡ್ತಿ ಕೊಲೆ – ಆರೋಪಿಗೆ ಜೀವವಾಧಿ ಶಿಕ್ಷೆ