ರಾಯಚೂರು: ಯಾವುದೇ ಮೀಸಲಾತಿ ಸಂವಿಧಾನ ಪ್ರಕಾರ 50% ಮೀರುವ ಹಾಗಿಲ್ಲ. ಶೇ.97 ಜನ ಹಿಂದುಳಿದ ಮತ್ತು ಉತ್ಪಾದಕ ಸಮುದಾಯದವರು. ಇವರ ಮೀಸಲಾತಿಯನ್ನು ಬಲಿಷ್ಠ ಸಮುದಾಯ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ ಎಂದು ಲೇಖಕ ಕುಂ.ವೀರಭದ್ರಪ್ಪ (Kum. Veerabhadrappa) ಖಂಡಿಸಿದ್ದಾರೆ.
ರಾಯಚೂರಿನಲ್ಲಿ (Raichuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ವಿಚಾರವಾಗಿ, ಆ ಸಮುದಾಯದಲ್ಲಿ ಲ್ಯಾಂಡ್ ಲಾರ್ಡ್ಸ್ ಇದ್ದಾರೆ, ಸಿಎಂ ಆಗಿದ್ದಾರೆ, ದೊಡ್ಡ ಪದವಿ ಅನುಭವಿಸಿದ್ದಾರೆ. ಅದು ಬಹಳ ಮುಂದುವರೆದ ಸಮುದಾಯ. ಸ್ವಾಮೀಜಿ ಬಸವಣ್ಣಕಲ್ಯಾಣ, ಕೂಡಲಸಂಗಮ ಶ್ರೀ ಎಂದು ತಮ್ಮ ನಾಮವಾಚಕದಲ್ಲಿ ಬಳಸಬಾರದು. ಬಸವಣ್ಣ ಹಿಂದುಳಿದ ಸಮುದಾಯಗಳಿಗಾಗಿ ಶ್ರಮಿಸಿದ್ದಾರೆ, ಅವರನ್ನು ದುರುಪಯೋಗ ಮಾಡಿಕೊಳ್ಳಬಾರದು. ಮೀಸಲಾತಿ ಕೇಳಲು ಹಿಂಸೆಯನ್ನು ಪ್ರಚೋದಿಸಬಾರದು ಎಂದು ಜಯಮೃತ್ಯುಂಜಯ ಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ- ಲಕ್ಷ್ಮಿ ಹೆಬ್ಬಾಳ್ಕರ್
Advertisement
Advertisement
ಸ್ವಾಮೀಜಿಯೂ ಸಹ ರಾಜಕಾರಣಿಯ ಒಂದು ಮುಖ. ಅವರು ಪೂರ್ಣ ಪ್ರಮಾಣದ ಸ್ವಾಮೀಜಿ ಅಲ್ಲ. ಆ ಸಮುದಾಯದ ಚುಕ್ಕಾಣಿ ಹಿಡಿಯಲು, ಪ್ರಸಿದ್ಧಿಯಾಗಲಿಕ್ಕೆ ದುರುಪಯೋಗ ಮಾಡಿಕೊಳ್ಳಬಾರದು. ಪಂಚಮಸಾಲಿ ಸಮುದಾಯ ಅತ್ಯಂತ ನಿರುಪದ್ರವಿ ಸಮುದಾಯ. ಸಮುದಾಯದ ದಿಕ್ಕು ತಪ್ಪಿಸುವ ಕೆಲಸ ಮಾಡಬಾರದು. ಜಯಮೃತ್ಯಂಜಯ ಸ್ವಾಮಿಗೆ ಕೂಡಲಸಂಗಮ ಹೆಸರು ಬಳಸಲು, ಬಸವಣ್ಣನ ಹೆಸರು ಹೇಳಲು ಹಕ್ಕಿಲ್ಲ. ತಮ್ಮ ಖುರ್ಚಿಗಾಗಿ ಅವಾಂತರಗಳನ್ನು ಸೃಷ್ಟಿಸಬಾರದು. ವಚನಾನಂದ ಸ್ವಾಮಿ ಸೇರಿ ಸಮುದಾಯದ ಎರಡು ಸ್ವಾಮಿಗಳ ತಿಕ್ಕಾಟ ನಡೆಯುತ್ತಿದೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತಿದೆ, ಇದು ಸರಿಯಲ್ಲ ಎಂದರು.
Advertisement
ಇನ್ನೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಮಾತನಾಡಿ, ಬಸವಣ್ಣನವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ರಾಜಕಾರಣಿಯನ್ನು ಒಳಗೆ ಹಾಕಬೇಕು, ಚಳುವಳಿಯಿಂದ ದೂರ ಇಡಬೇಕು, ಲಿಂಗಾಯತ ಸಮುದಾಯದಿಂದ ಬಹಿಷ್ಕಾರ ಮಾಡಬೇಕು. ಯಾರೇ ಆಗಲಿ ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಾರದು. ಅವರನ್ನು ಕ್ಷಮಿಸುವುದು ಸಮಾಜದ ದೊಡ್ಡ ದೌರ್ಬಲ್ಯ, ಲಿಂಗಾಯತ ಸಮುದಾಯ ಒಂದು ಜಾತಿಗೆ ಸೀಮಿತವಾದದ್ದಲ್ಲ. ಹಿಂದುಳಿದ ಸಮುದಾಯಗಳ ಒಕ್ಕೂಟ ಲಿಂಗಾಯತ. ಹಿಂದುಳಿದ ಸಮುದಾಯಗಳ ಒಕ್ಕೂಟದ ಸ್ವಾಯತ್ತತೆಯನ್ನ ಕಾಪಾಡುವ ಕೆಲಸವನ್ನ ಸ್ವಾಮಿಗಳು ರಾಜಕಾರಣಿಗಳು ಮಾಡಬೇಕು ಎಂದು ಕುಂ.ವೀರಭದ್ರಪ್ಪ ಹೇಳಿದರು.ಇದನ್ನೂ ಓದಿ: ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ