ಬೆಳಗಾವಿ: ಡಿಸೆಂಬರ್ 22 ರಂದು ಸುವರ್ಣ ಸೌಧದ (Suvarna Vidhana Soudha) ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡುವ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ (Panchamasali) ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mrityunjaya swamiji) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ (2A Reservation) ಘೋಷಿಸಲು ಸರ್ಕಾರಕ್ಕೆ ಡಿಸೆಂಬರ್ 19 ರವರೆಗೂ ಗಡುವು ನೀಡಲಾಗಿದೆ. ಮೀಸಲಾತಿ ಕೊಟ್ಟರೆ ವಿಜಯೋತ್ಸವ ಮಾಡುತ್ತೇವೆ. ಇಲ್ಲವಾದ್ರೆ ಡಿಸೆಂಬರ್ 22 ರಂದು ಸುವರ್ಣ ವಿಧಾನ ಸೌಧ ಮುತ್ತಿಗೆ ಹಾಕುತ್ತೇವೆ. ಮೀಸಲಾತಿಗಾಗಿ ಕಳೆದ ಎರಡು ವರ್ಷಗಳಿಂದ ಸುಧೀರ್ಘ ಹೋರಾಟ ಮಾಡಿದ್ದೇವೆ. ಡಿಸೆಂಬರ್ 19 ರಂದು ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿದ್ರು. ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಘೋಷಣೆ ಮಾಡುವ ಭರವಸೆ ಇದೆ. ಮುಖ್ಯಮಂತ್ರಿಗಳ ನಿಲುವು ನೋಡಿಕೊಂಡು ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್
Advertisement
Advertisement
ಇದೇ ಡಿಸೆಂಬರ್ 22 ರಂದು ಸುವರ್ಣಸೌಧದ ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡ್ತಿದ್ದೇವೆ. ನಾಳೆ ಸವದತ್ತಿ ಮತಕ್ಷೇತ್ರದಲ್ಲಿ ಪಂಚಮಸಾಲಿ ಮೀಸಲಾತಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮೀಸಲಾತಿ ಕೊಟ್ಟರೆ ಯಾವ ರೀತಿ ವಿಜಯೋತ್ಸವ ಮಾಡಬೇಕು. ಮೀಸಲಾತಿ ಕೊಡದಿದ್ದರೆ ಯಾವ ರೀತಿ ಉಗ್ರ ಹೋರಾಟ ಮಾಡಬೇಕು ಎಂಬ ಸ್ಪಷ್ಟವಾದ ತೀರ್ಮಾನ ಮಾಡುತ್ತೇವೆ. ಸವದತ್ತಿಯಿಂದ ಸುವರ್ಣ ವಿಧಾನ ಸೌಧವರೆಗೂ ಪಂಚಲಕ್ಷ ಪಾದಯಾತ್ರೆ ಮಾಡುತ್ತೇವೆ. ಈ ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ
Advertisement
ಸವದತ್ತಿ ಸಮಾವೇಶ ಸಂಜೆ 7 ಗಂಟೆಗೆ ಮುಕ್ತಾಯವಾಗಲಿದೆ. ಅಷ್ಟರೊಳಗಾಗಿ ರಾಜ್ಯ ಸರ್ಕಾರದ ನಿರ್ಧಾರ ಗೊತ್ತಾಗಲಿದೆ. ಸರ್ಕಾರದ ನಿರ್ಧಾರ ನೋಡಿಕೊಂಡು ಹೋರಾಟ ಮಾಡುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸವದತ್ತಿ ಸಮಾವೇಶ ಆಯೋಜನೆ ಮಾಡಿದ್ದೇವೆ. ವಿರಾಟ ಸಮಾವೇಶಕ್ಕೆ ನೂರು ಎಕರೆ ಪ್ರದೇಶದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಂಚಮಸಾಲಿ ಶಕ್ತಿ ಪ್ರದರ್ಶನಕ್ಕೆ ಸ್ವಯಂ ಪ್ರೇರಿತರಾಗಿ ರೊಟ್ಟಿ ಬುತ್ತಿಕಟ್ಟಿಕೊಂಡು ಬರಲಿದ್ದಾರೆ. ಯಡಿಯೂರಪ್ಪನವರು ಕೊಟ್ಟ ಮಾತು ತಪ್ಪಿದ್ದಕ್ಕೆ ಬಾಗಲಕೋಟೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ವಿ. ಅಂತಿಮವಾದ ಹೋರಾಟ ನಡೆಸಲು ನಾವು ಸನ್ನದ್ಧರಾಗಿದ್ದೇವೆ. ಮೀಸಲಾತಿ ನೀಡದಿದ್ದರೆ ಅಹೋರಾತ್ರಿ ಹೋರಾಟ ಮಾಡಲು ಬರುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಆಹ್ವಾನಿಸಿದ್ದಾರೆ. ಮೀಸಲಾತಿ ಕೊಡದಿದ್ದರೆ ಅಹೋರಾತ್ರಿ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.