ಹಾವೇರಿ: ಪಂಚಮಸಾಲಿ (Panchamasali) ಸಮುದಾಯಕ್ಕೆ 2ಎ ಮೀಸಲಾತಿ (Reservation) ನೀಡುವಂತೆ ಒತ್ತಾಯಿಸಿ 2ನೇ ಬಾರಿ ಸಿಎಂ ಮನೆಯವರೆಗೆ ಪಾದಯಾತ್ರೆ ನಡೆಸಲು ಪಂಚಮಸಾಲಿ ಸಮುದಾಯ ಮುಂದಾಗಿದೆ. 2ಡಿ ಬೇಡ ನಮಗೆ 2ಎ ಮೀಸಲಾತಿ ಘೋಷಿಸಬೇಕು. ಸಿಎಂ ತಾಯಿ ಮೇಲೆ ಆಣೆ ಮಾಡಿ ಮೋಸ ಮಾಡುತ್ತಿದ್ದಾರೆ ಎಂದು ಪಂಚಮಸಾಲಿ ಸಮುದಾಯದ ಜಯ ಮೃತ್ಯುಂಜಯ ಸ್ವಾಮೀಜಿ (JayaMrutyanjaya Swamiji) ಹಾಗೂ ನಾಯಕರು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಕೆಂಡ ಕಾರಿದ್ದಾರೆ.
Advertisement
ಪಂಚಮಸಾಲಿ ಸಮುದಾಯದವರು ಮೀಸಲಾತಿಗಾಗಿ ಸಾಲು ಸಾಲು ಹೋರಾಟ ಮಾಡಿದ್ರು. ಇವರ ಪ್ರತಿಭಟನೆಗೆ ಮಣಿದ ಸರ್ಕಾರ 2ಡಿ ಮೀಸಲಾತಿ ಘೋಷಿಸಿದೆ. ಆದರೆ, ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಸಮುದಾಯದವರು 2ಡಿ ಮೀಸಲಾತಿ ಬೇಡ. ನಮಗೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ. ಜನವರಿ 13ಕ್ಕೆ ಬಸವರಾಜ ಬೊಮ್ಮಾಯಿ ಕ್ಷೇತ್ರದ ಚೆನ್ನಮ್ಮ ವೃತ್ತದಿಂದ ಪಾದಯಾತ್ರೆ ಆರಂಭಿಸಿ, ಸಿಎಂ ಮನೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಮೀಸಲಾತಿಯ ಆದೇಶ ಪ್ರತಿ ನಮ್ಮ ಕೈಗೆ ಸಿಗೋವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಯುವ ದೇಹದಾರ್ಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
Advertisement
Advertisement
150 ಕ್ಷೇತ್ರಗಳಲ್ಲಿ ನಾವು ನಿರ್ಣಾಯಕರಾಗಿದ್ದೇವೆ. ಜ. 12ರ ಒಳಗಾಗಿ ಮೀಸಲಾತಿ ಆಗದಿದ್ದರೆ 13ಕ್ಕೆ ಮುತ್ತಿಗೆ ಹಾಕಿ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ. ಇದು ಕೊನೆಯ ಹೋರಾಟ, ಕೊನೆಯ ಕರೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. 30 ಜಿಲ್ಲೆಗಳು 224 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಸಮಾಜ ಜಾಗೃತಿ ಮಾಡಿದ್ದೇವೆ. 2ಎ ಮೀಸಲಾತಿ ನಮ್ಮ ಹಕ್ಕೊತ್ತಾಯ ಅಂತಿದ್ದಾರೆ. ಅಲ್ಲದೇ ಸಿಎಂ ತಾಯಿ ಮೇಲೆ ಆಣೆ ಮಾಡಿ ಮೋಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಪಂಚಮಸಾಲಿ ಸಮುದಾಯದ 2ಡಿ ಮೀಸಲಾತಿ ಬಿಟ್ಟು 2ಎ ಮೀಸಲಾತಿ ನೀಡುವಂತೆ 2ನೇ ಬಾರಿ ಸಿ.ಎಂ.ಮನೆಯ ಮುಂದೆ ಧರಣಿ ಸತ್ಯಾಗ್ರಹಕ್ಕೆ ಸಜ್ಜಾಗಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿಗಾಗಿ 4 ಜಿಲ್ಲೆಯಲ್ಲಿ ಪೊಲೀಸರಿಂದ ಶೋಧ- ಮೈಸೂರಲ್ಲೇ ಎಡಿಜಿಪಿ ಠಿಕಾಣಿ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k