ಬಾಗಲಕೋಟೆ: ಅನಾರೋಗ್ಯಕ್ಕೆ ತುತ್ತಾಗಿದ್ದ ಪಂಚಮಸಾಲಿ (Panchamasali) ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಆರೋಗ್ಯದಲ್ಲಿ (Health) ಚೇತರಿಕೆ ಕಂಡು ಬಂದಿದೆ.
ಬಾಗಲಕೋಟೆ (Bagalkote) ಕೆರೂಡಿ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡ ಬಂದ ಹಿನ್ನೆಲೆಯಲ್ಲಿ ಭಕ್ತರು ಅವರನ್ನು ಭೇಟಿ ಮಾಡಿ ವಿಚಾರಿಸುತ್ತಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಪೀಠಕ್ಕೆ ಹೊಸ ಶ್ರೀ? ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆಗೆ ನಿರ್ಧಾರ?
ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಸಂಸದ ಪಿಸಿ ಗದ್ದಿಗೌಡರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮಧ್ಯಾಹ್ನ ಆಸ್ಪತ್ರೆಗೆ ಧಾರವಾಡದ ಶಾಸಕ ಅರವಿಂದ್ ಬೆಲ್ಲದ್ ಭೇಟಿ ನೀಡಲಿದ್ದಾರೆ.
ಲೋ ಬಿಪಿ, ವಾಂತಿ, ಎದೆ ನೋವು, ತಲೆ ನೋವಿನಿಂದ ಬಳಲುತ್ತಿರುವ ಸ್ವಾಮೀಜಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು.