ನೆಲಮಂಗಲ: ಅನಾದಿ ಕಾಲದಿಂದಲೂ ಓಡಾಡುತ್ತಿದ್ದ ರಸ್ತೆಗೆ ಅಡ್ಡಲಾಗಿ ಗ್ರಾಮ ಪಂಚಾಯತಿ ಸದಸ್ಯೆ ಪತಿ ಜೆಸಿಬಿಯಿಂದ ಕಂದಕ ತೋಡಿ ರಸ್ತೆ ಮುಚ್ಚಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
Advertisement
ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕುಲುವನ ಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆಗೆ ಚುನಾವಣೆ ಹಿನ್ನೆಲೆ ಯಾರೊಬ್ಬರು ಮತ ನೀಡಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಪತಿರಾಯ ಶಿವಕುಮಾರ್ ಗ್ರಾಮದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಅವರ ಮೇಲೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡದೇ ಅಂಧ ದರ್ಬಾರ್ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ಜಮೀನಿನ ಮುಖಾಂತರ ಊರಿನ ಜನಗಳು ಕೆರೆಗೆ ಓಡಾಡುತ್ತಾರೆ ಎನ್ನುವ ಉದ್ದೇಶದಿಂದ ಮೊನ್ನೆಯಷ್ಟೇ ಗ್ರಾಮದ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಮಣ್ಣು ಸುರಿಸಿರುವ ಆರೋಪ ಈಗ ಕೇಳಿ ಬಂದಿದೆ. ಇದನ್ನೂ ಓದಿ: 7 ಕೋಟಿ ಮೊತ್ತದ ಅಡಿಕೆಯ ಜೊತೆ 7 ಲಾರಿ ಜಪ್ತಿ – 7 ಮಂದಿ ಅರೆಸ್ಟ್
Advertisement
Advertisement
ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಸಿಇಒ ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಆದೇಶಿಸಿದ್ದರು. ಈ ಹಿನ್ನೆಲೆ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ. ಈಗ ಆತನ ಜಮೀನಿನ ದಾರಿಯಲ್ಲಿ ಸಾರ್ವಜನಿಕರು ಕೆರೆಗೆ ಓಡಾಡುತ್ತಾರೆ ಎಂದು ರಸ್ತೆಗೆ ಅಡ್ಡಲಾಗಿ ಕಂದಕ ತೆಗೆದು ಬೇಲಿ ಹಾಕಿದ್ದಾರೆ. ಇದನ್ನೂ ಓದಿ: ಯೋಗ ಇರೋರು ಮಾತ್ರ ಯೋಗ ಮಾಡುತ್ತಾರೆ: ಡಿಸಿ ಆರ್ ಲತಾ
Advertisement
ಗ್ರಾಮದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50ಕ್ಕಿಂತಲೂ ಹೆಚ್ಚು ಕಂದಕ ತೋಡಿದ್ದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ನಮಗೆ ರಸ್ತೆ ಬೇಕು ಇಲ್ಲಿನ ಜನ ರೈತಾಪಿ ವರ್ಗದವಾರಗಿದ್ದು, ನಮಗೆ ಪ್ರತಿಯೊಂದಕ್ಕೂ ಕೆರೆಗೆ ಹೋಗಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ನಮ್ಮ ಗ್ರಾಮಕ್ಕೆ ಬಂದು ಕೆರೆಗೆ ರಸ್ತೆ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ.