ಪಾಟ್ನಾ: ಬಿಹಾರದ ಹಿಂದಿ ಪತ್ರಿಕೆಯೊಂದರ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
‘ರಾಷ್ಟ್ರೀಯ ಸಹಾರಾ’ಪತ್ರಿಕೆಯ ಪತ್ರಕರ್ತ ಪಂಕಜ್ ಮಿಶ್ರಾ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪಂಕಜ್ ಮಿಶ್ರಾ ಅವರು ಬ್ಯಾಂಕ್ ನಿಂದ ಮನೆಗೆ ತೆರಳುತ್ತಿದ್ದ ವೇಳೆ ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ.
ರಕ್ತಸ್ರಾವದಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ದಾಳಿ ಬಗ್ಗೆ ಅರ್ವಾಲಾದ ಎಸ್ಪಿ ದಿಲೀಪ್ ಕುಮಾರ್ ಅವರು ಪ್ರತಿಕ್ರಿಯಿಸಿ, ವೈಯ್ಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಿಶ್ರಾ ಅವರ ಮೇಲೆ ದಾಳಿಯಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.