– ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗಿದ್ದ ಅಥ್ಲೀಟ್
ಘಾಜಿಯಾಬಾದ್: ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಆಯ್ಕೆಯಾಗಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (Chirag Tyagi) (25) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಘಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ.
ಚಿರಾಗ್ ತ್ಯಾಗಿ ದೇಶದ ಭರವಸೆಯ ಪ್ಯಾರಾ ಅಥ್ಲೀಟ್‌ಗಳಲ್ಲಿ ಒಬ್ಬರಾಗಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್ಗೆ ಅವರು ಅರ್ಹತೆ ಪಡೆದಿದ್ದರು. ಇದನ್ನೂ ಓದಿ: IPL Final | ಚಾಂಪಿಯನ್, ರನ್ನರ್‌ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು?
ಬುಧವಾರ ಬೆಳಗ್ಗೆ ಚಿರಾಗ್ ತಮ್ಮ ಕುಟುಂಬದವರಿಗೆ ಕರೆ ಮಾಡಿ ಮಧ್ಯಾಹ್ನ 3:30ರೊಳಗೆ ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಆ ಬಳಿಕ ಅವರ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ಕುಟುಂಬದವರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ಶನಿವಾರ ಘಾಜಿಯಾಬಾದ್‌ನ ಸಾಯಿ ಕುಂಜ್ ಪ್ರದೇಶದಲ್ಲಿ ಚಿರಾಗ್ ಅವರ ಮೃತದೇಹ ಪತ್ತೆಹಚ್ಚಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಾಳೆಯಿಂದ ಶಾಲೆ ಪುನಾರಂಭ – ಹಬ್ಬದ ಸಡಗರದಲ್ಲಿ ಮಕ್ಕಳನ್ನ ಸ್ವಾಗತಿಸಲು ಸೂಚನೆ
ಯಶ್ ಖಾಟಿಕ್ ಮತ್ತು ಚಿರಾಗ್ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. ಇಬ್ಬರೂ ದೃಷ್ಟಿಹೀನರ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಒಟ್ಟಿಗೆ ತರಬೇತಿ ಪಡೆದಿದ್ದ ಅವರು ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಇದನ್ನೂ ಓದಿ: ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ – ಮಂಡ್ಯ ಜಿಲ್ಲೆಗೆ 2 ಸಚಿವ ಸ್ಥಾನದ ಬೇಡಿಕೆಯಿಟ್ಟ ಗಣಿಗ ರವಿಕುಮಾರ್
ವಿಚಾರಣೆ ವೇಳೆ ಮಹತ್ವದ ಮಾಹಿತಿ ಬಹಿರಂಗವಾಗಿದ್ದು, ಯಶ್ ಖಾಟಿಕ್ ಅವರ ದಾಖಲೆಗಳ ಪರಿಶೀಲನೆ ಕುರಿತು ಚಿರಾಗ್ ಈ ಹಿಂದೆ ದೂರು ನೀಡಿದ್ದರು. ಇದರಿಂದ ಯಶ್ ಅನರ್ಹಗೊಂಡಿದ್ದ ಎನ್ನಲಾಗಿದೆ. ಈ ದ್ವೇಷದ ಹಿನ್ನೆಲೆಯಲ್ಲಿ ಚಿರಾಗ್ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡ ಯಶ್, ಅವರ ಬೆನ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಹತ್ಯೆಗೆ ಬಳಸಿದ ಪಿಸ್ತೂಲ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ
ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಯ ಕುರಿತು ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು – ಮೂವರ ಶವ ಪತ್ತೆ
