ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ (Nandi Hills) ಪ್ರಕೃತಿ ಸೊಬಗು, ಸೌಂದರ್ಯ ನೊಡುವುದೇ ಚೆಂದ. ಅಂತಹದ್ದರಲ್ಲಿ ಆಗಸದಲ್ಲಿ ಹಕ್ಕಿಯಂತೆ ಹಾರಾಡುತ್ತಾ, ಇಡೀ ನಂದಿಬೆಟ್ಟದ ವಿಹಂಗಮ ನೋಟ ನೋಡುವ ಅವಕಾಶ ಸಿಕ್ಕರೆ ಹೇಗಿರಬೇಡ ಹೇಳಿ… ಇಂತಹದೊಂದು ಅವಕಾಶ ಈಗ ಪ್ರವಾಸಿಗರ ಪಾಲಿಗೆ ಸಿಗುತ್ತಿದೆ. ಇದಕ್ಕಾಗಿ ನಂದಿಬೆಟ್ಟದಲ್ಲಿ ಪ್ಯಾರಾಗ್ಲೈಡಿಂಗ್ (Paragliding) ಆರಂಭವಾಗಿದೆ.
Advertisement
ಹೌದು. ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ನಂದಿಗಿರಿಧಾಮದ ಮೇಲೆ ಖಾಸಗಿ ಸಂಸ್ಥೆಯೊಂದು ಪ್ರವಾಸಿಗರಿಗೆ (Tourists) ಪ್ಯಾರಾಗ್ಲೈಂಡಿಂಗ್ ಮಾಡಲು ಅವಕಾಶ ಕಲ್ಪಿಸಿದೆ. ಇದ್ರಿಂದ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಹಕ್ಕಿಯಂತೆ ಆಗಸದಲ್ಲಿ ಹಾರಾಡುವ ಮೂಲಕ ಗಿರಿಧಾಮದ ಸೌಂದರ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್
Advertisement
Advertisement
ಪ್ಯಾರಾಗ್ಲೈಂಡಿಗ್ ಮಾಡುವ ಆಸಕ್ತ ಪ್ರವಾಸಿಗರಿಗೆ ಒಮ್ಮೆಗೆ 15 ನಿಮಿಷಕ್ಕೆ 4,600 ರೂ. ಶುಲ್ಕ ವಿಧಿಸಲಾಗುತ್ತಿದೆ. ಸದ್ಯ ಬೆಂಗಳೂರಿನಿಂದ ಬರುವ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪ್ಯಾರಾಗ್ಲೈಡಿಂಗ್ ಮೂಲಕ ಪ್ರಕೃತಿ ಸೊಬಗು ಸವಿಯಲು ಮುಂದಾಗುತ್ತಿದ್ದಾರೆ. ಇದನ್ನೂ ಓದಿ: Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ