ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ (Paralympics 2024) ಭಾರತೀಯ ಕ್ರೀಡಾಪಟುಗಳ ಪದಕ ಗೆಲ್ಲುವ ಪ್ರಾಬಲ್ಯ ಮುಂದುವರಿದಿದೆ. ಬ್ಯಾಡ್ಮಿಂಟನ್‌ನಲ್ಲಿ ಮಹಿಳೆಯರ ಸಿಂಗಲ್ಸ್ ಎಸ್‌ಯು5 ವಿಭಾಗದಲ್ಲಿ ಭಾರತದ ಮನೀಶಾ ರಾಮದಾಸ್ (Manisha Ramadass) ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಇದು ಭಾರತದ ಪರ ಗೆದ್ದ 9ನೇ ಪದಕವೂ ಆಗಿದೆ.
🇮🇳🚨 HISTORY ALERT! Manisha Ramadass has become the first Indian woman to win a medal in badminton at the Paralympics.
📷 Pics belong to the respective owners • #ManishaRamadass #Badminton #ParaBadminton #Paris2024 #Paralympics #TeamIndia #BharatArmy #COTI🇮🇳 pic.twitter.com/pLeept1e2p
— The Bharat Army (@thebharatarmy) September 2, 2024
Advertisement
ಸೋಮವಾರ ಲಾ ಚಾಪೆಲ್ಲೆ ಅರೆನಾ ಕೋರ್ಟ್ 3 ರಲ್ಲಿ ಡೆನ್ಮಾರ್ಕ್‌ನ ಕ್ಯಾಥರೀನ್ ರೋಸೆಂಗ್ರೆನ್ ಅವರನ್ನು 25 ನಿಮಿಷಗಳಲ್ಲಿ 21-12, 21-8 ಸೆಟ್‌ಗಳಿಂದ ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್!
Advertisement
Advertisement
ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಮನೀಶಾ, ಎದುರಾಳಿಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಮೊದಲ ಸುತ್ತಿನಲ್ಲಿ ಕೇವಲ 13 ನಿಮಿಷಗಳಲ್ಲಿ 21-12 ಅಂತರದಲ್ಲಿ ಮುನ್ನಡೆ ಸಾಧಿಸಿದ್ದ ಮನೀಶಾ, 2ನೇ ಸೆಟ್‌ನಲ್ಲಿ ಕೇವಲ 12 ನಿಮಿಷಗಳಲ್ಲಿ 21-8 ಪಾಯಿಂಟ್‌ಗಳ ಅಂತರದಲ್ಲಿ ಸೋಲಿಸಿ ಪದಕ ತಮ್ಮದಾಗಿಸಿಕೊಂಡರು. ಇದನ್ನೂ ಓದಿ: ಬೇಬಿ ಬಂಪ್ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್ ಪೋಸ್; ಬಾಲಿವುಡ್‌ನ ಕ್ಯೂಟ್ ಕಪಲ್ ಫುಲ್ ಶೈನ್
Advertisement
ಈ ಗೆಲುವಿನೊಂದಿಗೆ ಮನೀಶಾ ಪ್ಯಾರಾಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮನೀಶಾಗೆ ಚಿನ್ನದ ಪದಕದ ಪಂದ್ಯದಲ್ಲಿ ಸ್ಪರ್ಧಿಸುವ ಅವಕಾಶವಿತ್ತು. ಆದರೆ ಸೆಮಿಸ್‌ನಲ್ಲಿ ತುಳಸಿಮತಿ ಮುರುಗೇಶನ್ ವಿರುದ್ಧ ಸೋತ ಕಾರಣ, ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು. ಇದನ್ನೂ ಓದಿ: ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ