ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

Public TV
1 Min Read
paramedical student dies of heart attack Chittapur Kalaburagi

ಕಲಬುರಗಿ: ಹೃದಯಾಘಾತದಿಂದ (Heart Attack) 17 ವರ್ಷದ ವಿದ್ಯಾರ್ಥಿಯೊಬ್ಬ  ಮೃತಪಟ್ಟ  ಘಟನೆ ಚಿತ್ತಾಪುರ (Chittapur) ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.

ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ (Kalaburagi) ನಗರದಲ್ಲಿ ಪ್ಯಾರಾ ಮೆಡಿಕಲ್ (Paramedical) ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಗ್ರಾಮದಲ್ಲಿ ಸ್ನೇಹಿತರ ಜೊತೆ ಕುಳಿತಾಗ ಎದೆ ನೋವು ಕಾಣಿಸಿಕೊಂಡಿದೆ.

ತಕ್ಷಣ ಗೆಳೆಯನೊಬ್ಬ ಕೋರೇಶ್‌ನನ್ನು ಆಸ್ಪತ್ರೆಗೆ (Hospital) ಕರೆದೊಯ್ಯಲು ಯತ್ನಿಸಿದ್ದಾನೆ. ಈ ಮಧ್ಯೆ ಬೈಕ್ (Bike) ಮೇಲೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಏಕೈಕ ಮಗನನ್ನು ಹೊಂದಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹರೆಯಕ್ಕೆ ಕಾಲಿಡುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ಇಡೀ ಗ್ರಾಮದ ಜನರಲ್ಲಿ ಬೇಸರ ಮೂಡಿಸಿದೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ – ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು

Share This Article