ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿ (Narendra Modi) ಅವರಿಗೆ ರಾಜ್ಯ ಗೃಹಸಚಿವ ಜಿ.ಪರಮೇಶ್ವರ್ (G Parameshwara) ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ, ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ!
ಕಳೆದ 10 ವರ್ಷದಲ್ಲಿ ಜನ ಸಮುದಾಯಗಳು ತೊಂದರೆಗೀಡಾಗಿದ್ದಾರೆ. ಹಿಂದೆ ಏನೆಲ್ಲ ತಪ್ಪುಗಳಾಗಿದೆ ಅದನ್ನ ಸರಿಪಡಿಸಿಕೊಳ್ಳಲಿ, ಈಗಲಾದರೂ ಜನರ ದೃಷ್ಟಿಯಿಂದ ಕೆಲಸ ಮಾಡಬೇಕು. ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿ. ಈ ಹಿಂದಿನ ಮಂತ್ರಿಗಳು ರಾಜ್ಯದ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಸೇರಿ ಹಲವರು ವಿಫಲರಾಗಿದ್ದಾರೆ. ಆದ್ದರಿಂದ ನಮ್ಮ ರಾಜ್ಯಕ್ಕೆ ಅನುಕೂಲವಾಗುವ ಖಾತೆ ಸಿಗಲಿ ಎಂದು ಹಾರೈಸಿದ್ದಾರೆ.
ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ವಿಚಾರಣೆಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಚುನಾವಣೆಯಿಂದ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ, ಯಾವುದೇ ಕೆಲಸಗಳು ಆಗಿರಲಿಲ್ಲ. ಶೀಘ್ರದಲ್ಲೇ ವರ್ಗಾವಣೆ ಕೆಲಸಗಳು ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ನಿತೀಶ್ ಕುಮಾರ್‌ಗೆ ‘ಇಂಡಿಯಾ’ ಒಕ್ಕೂಟ ಪ್ರಧಾನಿ ಸ್ಥಾನದ ಆಫರ್ ನೀಡಿತ್ತು: ಜೆಡಿಯು ನಾಯಕನ ಸ್ಫೋಟಕ ಹೇಳಿಕೆ
ಇದೇ ವೇಳೆ ಅನೇಕ ಸಚಿವರ ಕ್ಷೇತ್ರದಲ್ಲಿ ಕಡಿಮೆ ಲೀಡ್ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ನನ್ನ ಕ್ಷೇತ್ರದಲ್ಲಿಯೂ ಕಡಿಮೆ ಲೀಡ್ ಬಂದಿದೆ. ಹೀಗಾಗಿ ಎಐಸಿಸಿ ನೇತೃತ್ವದಲ್ಲಿ ಕಮಿಟಿ ರಚನೆಯಾದ್ರೆ ಒಳ್ಳೆಯದು. ಎಲ್ಲಿ ಲೋಪ ಆಯ್ತು ಅಂತ ಮಾಹಿತಿ ಸಂಗ್ರಹ ಆಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದಿಂದ ಭಾರತಕ್ಕೆ ಬಂದ ಎರಡೂವರೆ ವರ್ಷದ ಹೆಣ್ಣುಮಗುವಿಗೆ H5N1 ಹಕ್ಕಿ ಜ್ವರ!