ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಮನೆಯಲ್ಲಿ ಐಟಿ ದಾಳಿ ಆದ ಬೆನ್ನಲ್ಲೇ ಐಟಿ ಅಧಿಕಾರಿಗಳು ಪರಂ ಪಿಎ ಮನೆ ಮೇಲೂ ದಾಳಿ ನಡೆಸಿದ್ದಾರೆ. ಹೀಗಾಗಿ ನನಗೆ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪಿಎ ರಮೇಶ್ ಬೆದರಿಕೆ ಹಾಕಿದ್ದಾರೆ.
ಪರಮೇಶ್ವರ್ ಅವರ ಪಿಎ ರಮೇಶ್ ತನ್ನ ಆಪ್ತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಇಬ್ಬರು ಆಪ್ತರ ಬಳಿ ಮಾತನಾಡಿ, ನಾನು ಯೂನಿವರ್ಸಿಟಿ ಕ್ಯಾಂಪಸ್‍ನಲ್ಲಿದ್ದೀನಿ ಎಂದು ಹೇಳಿ ರಮೇಶ್ ನಾಪತ್ತೆ ಆಗಿದ್ದಾರೆ. ಇದನ್ನೂ ಓದಿ: ಮಾಜಿ ಡಿಸಿಎಂ ಪರಮೇಶ್ವರ್ಗೆ ಇಡಿ ಸಂಕಷ್ಟ?
Advertisement
Advertisement
ನಾನು ಬಡವ. ಹೀಗಿದ್ದರೂ ಐಟಿ ಅಧಿಕಾರಿಗಳು ನನ್ನ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ನನಗೆ ಐಟಿ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ಐಟಿ ಅಧಿಕಾರಿಗಳು ಸಿಕ್ಕಾಪಟ್ಟೆ ಪ್ರಶ್ನೆಗಳನ್ನು ಕೇಳುತ್ತಾರೆ. ನನಗೆ ಅವರ ಪ್ರಶ್ನೆಗಳಿಗೆ ಉತ್ತರಿಸಲು ಆಗುವುದಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಮೆಡಿಕಲ್ ಕಾಲೇಜಿಗೆ 500 ಕೋಟಿ ರೂ. ಸುರಿದು ತಗ್ಲಾಕ್ಕೊಂಡ ಮಾಜಿ ಡಿಸಿಎಂ
Advertisement
Advertisement
ಎರಡು ದಿನಗಳ ಕಾಲ ಐಟಿ ಅಧಿಕಾರಿಗಳು ಪರಮೇಶ್ವರ್ ಅವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಿಕ್ಕ ಸಂಪತ್ತು ನೋಡಿ ಶಾಕ್ ಗೆ ಒಳಗಾಗಿದ್ದಾರೆ. ಪರಮೇಶ್ವರ್ ಬರೋಬ್ಬರಿ 103 ಕೋಟಿ ಆಸ್ತಿಯನ್ನು ಬಹಿರಂಗಪಡಿಸಿಲ್ಲ. 100 ಕೋಟಿ ದಾಖಲೆ ಪತ್ರಗಳಿಗೆ ಉತ್ತರ ನೀಡಿಲ್ಲ. ಕಾಲೇಜಿನಲ್ಲಿ ದುಡಿದ ಹಣ ಪಂಚತಾರಾ ಹೋಟೆಲ್ ಮೇಲೆ ಹಾಗೂ ಕಾಲೇಜಿನ ಸಿಬ್ಬಂದಿಗೆ ಗೊತ್ತಾಗದ ರೀತಿಯಲ್ಲಿ ಅವರ ಹೆಸರಲ್ಲಿ 4.6 ಕೋಟಿ ಹೂಡಿಕೆ ಮಾಡಿದ್ದಾರೆ. ಇದನ್ನೂ ಓದಿ: ಪರಮೇಶ್ವರ್ ಬಹಿರಂಗಪಡಿಸದ ಆಸ್ತಿ ಬರೋಬ್ಬರಿ 103 ಕೋಟಿ ರೂ.
ಸದಾಶಿವನಗರದ ನಿವಾಸದಲ್ಲಿ 89 ಲಕ್ಷ ರೂ., ನೆಲಮಂಗಲದ ಮನೆಯಲ್ಲಿ 1.8 ಕೋಟಿ ರೂ. ಹೀಗೆ ಪರಮೇಶ್ವರ್ ಗೆ ಸಂಬಂಧಿಸಿದ್ದ ಒಟ್ಟು 4.5 ಕೋಟಿ ರೂ. ನಗದು ದೊರಕಿದೆ. ಸಿದ್ದಾರ್ಥ ಶಿಕ್ಷಣ ಸಂಸ್ಥೆಯಿಂದ ಕೋಟಿ ಕೋಟಿ ತೆರಿಗೆ ವಂಚನೆ ಮಾಡಲಾಗಿದೆ. 2002ರಿಂದಲೂ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ತೆರಿಗೆ ಕಟ್ಟಿಲ್ಲ. ಈ ಮೂಲಕ ಶಿಕ್ಷಣ ಸಂಸ್ಥೆ ಪಾಲಿಕೆಗೆ ಸುಮಾರು 2 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಪರಮೇಶ್ವರ್ ಅಣ್ಣನ ಮಗ ಆನಂದ್ ಸಿದ್ದಾರ್ಥ್ ಬಳಿ ಡೈರಿ ಪತ್ತೆಯಾಗಿದ್ದು, ಡೈರಿಯಲ್ಲಿ ಮೆಡಿಕಲ್ ಸೀಟು ಹಂಚಿಕೆ ಬಗ್ಗೆ ಉಲ್ಲೇಖ ಮಾಡಿರುವುದನ್ನು ಮಾಡಿದನ್ನು ಆದಾಯ ತೆರಿಗೆ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.