– ಶೀಘ್ರದಲ್ಲೇ ವರದಿ ಕೊಡಲು ಎಸ್‌ಐಟಿಗೆ ಸೂಚನೆ
ಬೆಂಗಳೂರು: ಧರ್ಮಸ್ಥಳ ಪ್ರಕರಣಗಳ (Dharmasthala Case) ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿದ್ದು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಅಂತ ಎಸ್‌ಐಟಿಗೆ ತಿಳಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್‌ಐಟಿಯಿಂದ (SIT) ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಅಂತ ಎಸ್‌ಐಟಿಗೆ ತಿಳಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ಪುನಾರಚನೆ/ವಿಸ್ತರಣೆ ಗೊತ್ತಿಲ್ಲ: ಪರಮೇಶ್ವರ್
ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಆದ್ರೆ ಎಸ್‌ಐಟಿನವ್ರು ಅವರ ಕೆಲಸ ಮಾಡ್ತಿದ್ದಾರೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್‌ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ ಎಸ್‌ಐಟಿಗೆ ತಿಳಿಸಿದ್ದೇವೆ. ಸುಪ್ರೀಂಕೋರ್ಟ್ ನಲ್ಲಿ ಚಿನ್ನಯ್ಯ ಪಿಐಎಲ್ ವಜಾ ಆದ ವಿಚಾರವನ್ನೂ ಎಸ್‌ಐಟಿನವ್ರು ವರದಿಯಲ್ಲಿ ಸೇರಿಸಿಯೇ ಕೊಡ್ತಾರೆ. ಹೊಸ ದೂರುಗಳು ಬಂದಿವೆ. ಹಲವರು ಹೇಳಿಕೆಗಳನ್ನು ಕೊಡ್ತಿದ್ದಾರೆ. ಇದಕ್ಕೆಲ್ಲ ಅಂತಿಮ ಹಾಡಲು ಹೇಳಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ಮಾಡ್ತೇವೆ – ಪರಮೇಶ್ವರ್
ಇನ್ನು ತಿಮರೋಡಿ ಬಂಧನವಾಗದ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಂಧನಕ್ಕೆ ಕಾನೂನು ತೊಡಕುಗಳು ಏನೇನಿದೆಯೋ ಅದರ ಬಗ್ಗೆ ನಾನು ಇನ್ನೂ ಚರ್ಚೆ ಮಾಡಿಲ್ಲ. ಏನೇ ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡಬೇಕು. ಗಡಿಪಾರು ವಿಚಾರವನ್ನು ಅವರು ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಅದೇನಾಗುತ್ತೆ ಅಂತ ನೋಡೋಣ. ಆದ್ರೆ ತಿಮರೋಡಿ ಬಂಧಿಸೋದಾಗಲೀ, ಕ್ರಮ ಕೈಗೊಳ್ಳೋದಾಗಲೀ ಕಾನೂನು ಪ್ರಕಾರವೇ ಮಾಡಲಾಗುತ್ತೆ. ಇದರ ಬಗ್ಗೆ ಸರ್ಕಾರ ಎಸ್‌ಐಟಿಗೆ ಸೂಚನೆ ಕೊಡಕ್ಕಾಗಲ್ಲ. ಅಂತಿಮವಾಗಿ ಎಸ್‌ಐಟಿಯವರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.