ಬೆಂಗಳೂರು: ನಿರ್ಭಯಾ ಯೋಜನೆಯಡಿ ಸಾಕಷ್ಟು ಅನುದಾನವಿದ್ದು, ಅದನ್ನು ಪಡೆದು ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ತಡೆಗೆ ಮುಂದಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಿದ್ದ ಆ್ಯಪ್ ಆಧಾರಿತ್ ಟ್ಯಾಕ್ಸಿ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಅನುದಾನ ಪಡೆದು 5 ಸಾವಿರ ಸಿಸಿಟಿಟಿ ಕ್ಯಾಮೆರಾ, 1 ಸಾವಿರ ದ್ವಿಚಕ್ರ ವಾಹನ, ಪೊಲೀಸ್ ವಾಹನ ಖರೀದಿಸಿ ಮಫ್ತಿ ಪೊಲೀಸರನ್ನು ಹೆಚ್ಚಿಸಬೇಕು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆ ಅಗತ್ಯವಿದೆ ಎಂದು ತಿಳಿಸಿದರು.
Advertisement
ಕ್ಯಾಬ್‍ಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ. ಆದರೂ ಅವು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ ಇನ್ನುಮುಂದೆ ಮಹಿಳಾ ಸುರಕ್ಷತೆಗೆ ಇರುವ ಕಾನೂನು, ಕಾರ್ಯಕ್ರಮ, ಸಹಾಯವಾಣಿ ಎಲ್ಲನ್ನೂ ಜಾಹಿರಾತು ಮೂಲಕ ಜನರಿಗೆ ಮಾಹಿತಿ ತಲುಪಿಸುವ ಕ್ರಮಕ್ಕೆ ಮುಂದಾಗಬೇಕು. ಯಾವುದೇ ಕಾರಣಕ್ಕೂ ಮಹಿಳೆ ಮೇಲೆ ದೌರ್ಜನ್ಯ ನಡೆಯಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು.
Advertisement
ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯುಕ್ತರು ಭಾಗವಹಿಸಿದ್ದರು.