ಅಹಮದಾಬಾದ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗವನ್ನು ಬಿಸಿ ಚಾಕುವಿನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಗುಜರಾತ್‍ನ ರಾಯಗಢ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಶುಕ್ರವಾರದಂದು 40 ವರ್ಷದ ಮಹಿಳೆ ತನ್ನ ಸ್ನೇಹಿತನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಮನೆಗೆ ಬಂದ ಪತಿ, ಪತ್ನಿ ಫೋನ್‍ನಲ್ಲಿ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟು ಜಗಳವಾಡಿದ್ದಾನೆ. ಆಗ ತಾನು ಏನು ತಪ್ಪು ಮಾಡಿಲ್ಲ ಅಂತ ಪತ್ನಿ ಮಕ್ಕಳ ಮೇಲೆ ಪ್ರಮಾಣ ಮಾಡಿದಾಗ ಇನ್ನಷ್ಟು ಕೋಪಗೊಂಡ ಪತಿ ಆಕೆಗೆ ಬೆಲ್ಟ್‍ನಿಂದ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ಮಾಡಿದ್ದಾನೆ.
Advertisement
Advertisement
ಥಳಿತದಿಂದ ಪತ್ನಿ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಆಗ ಆಕೆಯ ಖಾಸಗಿ ಅಂಗಕ್ಕೆ ಚಾಕುವೊಂದನ್ನು ಬಿಸಿ ಮಾಡಿ ಇಟ್ಟು ಚಿತ್ರಹಿಂಸೆ ನೀಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಮರುದಿನ ಮತ್ತೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತಿ ಮನೆಯಿಂದ ಹೊರ ಹೋಗ್ತಿದ್ದಂತೆ ಅಲ್ಲಿಂದ ತಪ್ಪಿಸಿಕೊಂಡ ಪತ್ನಿ, ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿ ಬಳಿಕ ಆಸ್ಪತ್ರೆ ಸೇರಿದ್ದಾಳೆ.
Advertisement
Advertisement
ಈ ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ವಿಕೃತಿ ಮೆರೆದ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಪಾಪಿ ಪತಿ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv