ರಿಷಬ್ ಶೆಟ್ಟಿ ಇದೀಗ ಕಾಂತಾರ್ ಚಾಪ್ಟರ್ 1ರ ಚಿತ್ರೀಕರಣದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಇವರು ಟೀಸರ್ ವೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ರಿಷಬ್ ಕೈಯಲ್ಲಿ ಒಂದು ಕಡೆ ತ್ರಿಶೂಲ ಮತ್ತೊಂದು ಕಡೆ ಪರಶುರಾಮನ ಕೊಡಲಿ (Kodali) ಇತ್ತು. ಈ ಕೊಡಲಿ ಕುತೂಹಲಕ್ಕೂ ಕಾರಣವಾಗಿತ್ತು. ಇದರ ಕುರಿತಾಗಿಯೇ ಇದೀಗ ಹೊಸದೊಂದು ಸುದ್ದಿ ಸಿಕ್ಕಿದೆ.
Advertisement
ಕೇರಳದ ಕಾಸರಗೋಡು ಜಿಲ್ಲೆಯ ಚಿಪ್ಪಾರುವಿನಲ್ಲಿ ರಾಜರ ಮನೆತನವೊಂದು ಇದ್ದು, ಇಲ್ಲಿಯೇ ಪರಶುರಾಮ (Parasurama) ಅವರು ಬಳಸಿರುವ 450 ವರ್ಷಗಳ ಇತಿಹಾಸವಿರುವ ಕೊಡಲಿ ಇದೆಯಂತೆ. ಈ ಕೊಡಲಿಯನ್ನು ರಿಷಬ್ ಬಯಸಿದರೆ ಶೂಟಿಂಗ್ ಗೆ ಕೊಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ಕೊಡಲಿಗೆ ಸಾಕಷ್ಟು ಮಹತ್ವವಿದ್ದು, ಅದನ್ನು ಪಡೆದುಕೊಂಡು ರಿಷಬ್ ಶೂಟ್ ಮಾಡ್ತಾರಾ ಕಾದು ನೋಡಬೇಕು.
Advertisement
Advertisement
ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವೀವ್ಸ್ ಪಡೆದಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ.
Advertisement
‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.
ಮೊದಲ ಭಾಗದ ಯಶಸ್ಸಿಗೆ ಕಾರಣವಾಗಿದ್ದ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಸಂಗೀತವು ಈ ಟೀಸರ್ ಮೂಲಕ ವಾಪಸ್ಸಾಗಿದೆ. ಈ ಟೀಸರ್ ನ ವೈಷಿಷ್ಟ್ಯವೆಂದರೆ, ಚಿತ್ರವು ಏಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಪ್ರತಿಯೊಂದು ಭಾಷೆಯ ಟೀಸರ್ ಒಂದೊಂದು ರಾಗದ ಮೂಲಕ ಅಂತ್ಯವಾಗಲಿದೆ.