ಕಲಬುರಗಿ: ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು (Parents) ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ (Yadrami) ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.
ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಇದನ್ನೂ ಓದಿ: ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ
ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ
ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಾರಾಷ್ಟ್ರ ಸಿಎಂ ಪಕ್ಷದ ನಾಯಕನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ
ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ : ನರೇಂದ್ರ ಮೋದಿ ಘೋಷಣೆ