ರಾಯಚೂರು: ಜಿಲ್ಲೆಯ ಮಾನ್ವಿ (Manvi) ಪಟ್ಟಣದಲ್ಲಿ ಪೋಷಕರ ಬುದ್ದಿಮಾತಿಗೆ ಮನನೊಂದು ಪುತ್ರ ನೇಣಿಗೆ (Suicide) ಶರಣಾಗಿರುವ ಘಟನೆ ನಡೆದಿದೆ. ನಿತ್ಯ ಮದ್ಯಪಾನ ಮಾಡದಂತೆ ಬುದ್ದಿಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
24 ವರ್ಷದ ಆದರ್ಶ ಆತ್ಮಹತ್ಯೆಗೆ ಶರಣಾದ ಯುವಕ. ನಿತ್ಯ ಮದ್ಯಪಾನ (Alcohol) ಸೇವಿಸಿ ಮನೆಗೆ ಬರುತ್ತಿದ್ದ ಮಗನ ವರ್ತನೆಯಿಂದ ಪೋಷಕರು ಬೇಸತ್ತಿದ್ದರು. ಇದೇ ವಿಚಾರಕ್ಕೆ ಬೈದು ಬುದ್ದಿವಾದ ಹೇಳಿದ್ದರು. ಬುದ್ದಿವಾದವನ್ನೇ ಅವಮಾನ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ‘ಇಂಡಿಯಾ’ ಬಣದಿಂದ ಅಂತರ ಕಾಪಾಡಿಕೊಂಡ ನಟ ಕಮಲ್ ಹಾಸನ್
Advertisement
Advertisement
ಮನೆಯ ಬಾತ್ ರೂಮ್‌ನಲ್ಲಿದ್ದ ಕಬ್ಬಿಣದ ಪೈಪ್‌ಗೆ ಹಗ್ಗ ಹಾಕಿ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮಾನ್ವಿ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಆದರ್ಶ ಮದ್ಯವ್ಯಸನಿಯಾಗಿದ್ದ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಣು ಶಕ್ತಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾಸಗಿ ಹಣ – ರೇಸ್‌ನಲ್ಲಿ ಟಾಟಾ, ರಿಲಯನ್ಸ್, ಅದಾನಿ