ದಾವಣಗೆರೆ: ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿದ್ದು, 20 ಸಾವಿರ ರೂ. ಗೆ ಮೂರು ದಿನಗಳ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣ ನಗರದ ಅಜಾದ್ ನಗರದಲ್ಲಿ ಬೆಳಕಿಗೆ ಬಂದಿದೆ.
ಅಜಾದ್ ನಗರದ ನಿವಾಸಿಗಳಾದ ಸಬೀನಾ ಹಾಗೂ ಸಿಕಂದರ್ ದಂಪತಿ ತಮ್ಮ ಮೂರು ದಿನಗಳ ಮಗುವನ್ನು ಮುಕ್ತಾರ್ ಎಂಬ ವ್ಯಕ್ತಿಗೆ ಮಾರಾಟ ಮಾಡಲು ಮುಂದಾಗುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
Advertisement
ಮಗು ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಇಲಾಖೆಯ ಡಿಡಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
Advertisement
ಮಗುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.