– 14 ವರ್ಷದ ಬಾಲಕನನ್ನು ರಿಮ್ಯಾಂಡ್ ಹೋಮ್‍ಗೆ ಕಳಿಸಿದ ಕೋರ್ಟ್
ಹೈದರಾಬಾದ್: ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಬಿಟ್ಟಿದ್ದಕ್ಕೆ ಹೈದರಾಬಾದ್ ಕೋರ್ಟ್ ಗುರುವಾರದಂದು 10 ಪೋಷಕರಿಗೆ 1 ದಿನದ ಜೈಲು ಶಿಕ್ಷೆ ವಿಧಿಸಿದೆ.
ಅಪ್ರಾಪ್ತರು ವಾಹನ ಚಾಲನೆ ಮಾಡೋ ಪ್ರಕರಣಗಳಿಗೆ ಬ್ರೇಕ್ ಹಾಕೋ ಸಲುವಾಗಿ ಇದೇ ಮೊದಲ ಬಾರಿಗೆ 14 ವರ್ಷದ ಬಾಲಕನನ್ನು ಒಂದು ದಿನದ ಮಟ್ಟಿಗೆ ರಿಮ್ಯಾಂಡ್ ಹೋಮ್‍ಗೆ ಕಳಿಸಲಾಗಿದೆ.
Advertisement
Advertisement
ಜೈಲಿಗೆ ಕಳಿಸಲಾಗಿರೊ ಪೋಷಕರ ವಿರುದ್ಧ ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 180ರಡಿ ಪ್ರಕರಣ ದಾಖಲಾಗಿದೆ. ಜೈಲು ಶಿಕ್ಷೆಯ ಜೊತೆಗೆ ಪೋಷಕರಿಗೆ 500 ರೂ. ದಂಡವನ್ನೂ ವಿಧಿಸಲಾಗಿದೆ.
Advertisement
Advertisement
ರಸ್ತೆ ಸುರಕ್ಷತಾ ಕಾರ್ಯಕರ್ತರೊಬ್ಬರು ಈ ಬಗ್ಗೆ ಮಾತನಾಡಿ, ಪ್ರತಿನಿತ್ಯ ಪೊಲೀಸರು ಇಂತಹ 10ಕ್ಕೂ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಅವರೆಲ್ಲರನ್ನೂ ನ್ಯಾಯಾಲಯ ಜೈಲಿಗೆ ಕಳಿಸಿದ್ರೆ ಖಂಡಿತವಾಗಿಯೂ ಪೋಷಕರಲ್ಲಿ ಬದಲಾವಣೆ ತರುತ್ತದೆ. ಅಪ್ರಾಪ್ತರ ಮೇಲೂ ಇದರಿಂದ ಪರಿಣಾಮವಾಗುತ್ತದೆ ಎಂದು ಹೇಳಿದ್ದಾರೆ.
ಅಪ್ರಾಪ್ತರು ವಾಹನ ಚಾಲನೆ ಮಾಡಿ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಈವರೆಗೆ 1079 ಪ್ರಕರಣಗಳು ದಾಖಲಾಗಿವೆ. ಫೆಬ್ರವರಿ ತಿಂಗಳಲ್ಲೇ 45 ಪೋಷಕರನ್ನು ಜೈಲಿಗೆ ಕಳಿಸಲಾಗಿದೆ ಎಂದು ವರದಿಯಾಗಿದೆ.