ಚಾಮರಾಜನಗರ: ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದೆ.
Advertisement
ಘಟನೆಯ ಬಳಿಕ ಬಾಲಕಿಯ ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು, ಗುರುವಾರದಂದೇ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಪಾಲಕರು ಮನೆಗೆ ಕರೆದೊಯ್ದಿದ್ದರು. ಇಂದು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪಾಲಕರು ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟಿಸಿ ಅಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ವಿನಾಕಾರಣ ಹಸು-ಕರುಗಳನ್ನು ಕಟ್ಟುತ್ತಿದ್ದು, ಜೊತೆಗೆ ಕೋಳಿಗಳನ್ನು ಮೇಯಲು ಬಿಡುತ್ತಿರುವ ಪರಿಣಾಮ ಈ ಘಟನೆ ನಡೆದಿದೆ. ಹೀಗಾಗಿ ಇಲಾಖೆ ಸರಿಯಾದ ರೀತಿ ವ್ಯವಸ್ಥೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಸದ್ಯ ಅಧಿಕಾರಿಗಳು ಇಂದು ಶಾಲೆಗೆ ಭೇಟಿ ಕೊಟ್ಟು ಪಾಲಕರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಸ್ಪೀಕರ್ ಅನುಮತಿ ಇಲ್ಲದೇ ಡಿಕೆಶಿ ಕೇಸ್ ತನಿಖೆಗೆ ಆದೇಶಿಸಿರುವುದು ಕಾನೂನುಬಾಹಿರ: ಸಿದ್ದರಾಮಯ್ಯ