ಲಕ್ನೋ: ಮೊಬೈಲ್ ಬಳಕೆ ಮಾಡುವ ಮಹಿಳೆಯರ ಮೇಲೆ ಅತ್ಯಾಚಾರವಾಗಿರುವ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಅಲ್ಲದೇ, ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಹೆಚ್ಚಾಗುವುದಕ್ಕೆ ಪೋಷಕರೇ ಕಾರಣ ಎಂದು ಉತ್ತರಪ್ರದೇಶದ ಬಾಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
15 ವರ್ಷದ ಒಳಗಿನ ಮಕ್ಕಳನ್ನು ಕಟ್ಟುನಿಟ್ಟಾಗಿ ಬೆಳೆಸಬೇಕು. ಅಲ್ಲದೇ, ಅವರಿಗೆ ಮುಕ್ತವಾಗಿ ಸಂಚರಿಸಲು ಹಾಗೂ ಸ್ಮಾರ್ಟ್ ಫೋನ್ ಬಳಕೆಗೆ ಅವಕಾಶ ನೀಡಬಾರದು ಎಂದಿದ್ದಾರೆ.
Advertisement
ಈ ಹಿಂದೆ ಉನ್ನವೋ ಅತ್ಯಾಚಾರ ಸಂತ್ರಸ್ತೆ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದಾಳೆ ಎಂದು ಸುರೇಂದ್ರ ಸಿಂಗ್ ಹೇಳಿದ್ದರು.”ಈ ಹಿಂದೆ ಆಕೆ ಯುವಕನ ವಿರುದ್ಧ ಸುಳ್ಳು ಅತ್ಯಾಚಾರದ ಕೇಸ್ ದಾಖಲಿಸಿದ್ದಳು. ಈಕೆಯ ದೂರಿನ ಪರಿಣಾಮ ಆತ 6 ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸುವಂತಾಗಿತ್ತು” ಎಂದು ಹೇಳಿಕೆ ನೀಡಿದ್ದರು.
Advertisement
ಕಳೆದ ಏಪ್ರಿಲ್‍ನಲ್ಲಿ ಉನ್ನಾವೋದ ಯುವತಿ ಮೇಲಿನ ಅತ್ಯಾಚಾರ ಆರೋಪದಡಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಬಂಧಿಸಲಾಗಿದೆ. ಸೆಂಗರ್ ಮತ್ತು ಅತ್ಯಾಚಾರ ಸಂತ್ರಸ್ತೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕಿದೆ. ತನಿಖೆ ನಂತರ ಸತ್ಯ ಹೊರ ಬರಲಿದೆ. ಆರೋಪ ಸಾಬೀತಾದರೆ ಶಿಕ್ಷೆ ವಿಧಿಸಬೇಕು ಎಂದರು.
Advertisement
ಸೆಂಗರ್ ಮತ್ತು ಆತನ ಸಹಚರರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಸಂತ್ರಸ್ತೆಯ ಕುಟುಂಬಸ್ಥರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ ಅವರು ಆತ್ಮಹತ್ಯಗೆ ಯತ್ನಿಸಿದ್ದರು. ಕೂಡಲೇ ಯುವತಿ ಹಾಗೂ ಕುಟುಂಬದವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೊಲೀಸರು ವಶಕ್ಕೆ ಪಡೆದಿದ್ದ ಸಂತ್ರಸ್ತೆಯ ತಂದೆ ತೀವ್ರ ಗಾಯದಿಂದಾಗಿ ಠಾಣೆಯಲ್ಲಿಯೇ ಮೃತಪಟ್ಟಿದ್ದರು.
Advertisement
ತನಿಖೆಯ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಏಪ್ರಿಲ್ 12 ರಂದು ಸಿಬಿಐಗೆ ವಹಿಸಿದೆ.
Parents of youths are responsible for growing incidents of rape as they do not take care of their wards. Children up to 15 years of age should be kept under strict vigil, they shouldn't be allowed to roam around freely and use smartphones: BJP MLA Surendra Singh pic.twitter.com/1uoqR9Li1B
— ANI UP/Uttarakhand (@ANINewsUP) May 1, 2018