ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಕುಮಟಾ ಭಾಗದಲ್ಲಿ ನಡೆದಿದ್ದ ಪರೇಶ್ ಮೆಸ್ತಾ (Paresh Mesta) ಸಾವಿನ ಪ್ರಕರಣವನ್ನು ಮತ್ತೆ ಸಿಬಿಐ (CBI) ಮೂಲಕ ತನಿಖೆ ಮಾಡಿಸುವಂತೆ ಪರೇಶ್ ಮೆಸ್ತಾ ತಂದೆ ಕಮಾಲಾಕರ್ ಮೆಸ್ತಾ ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಮನವಿ ಸಲ್ಲಿಸಿದ್ದಾರೆ.
Advertisement
ವಿಧಾನಸೌಧದಲ್ಲಿ ಸಿಎಂ ಭೇಟಿಯಾದ ಕಮಲಾಕರ್ ಮೆಸ್ತಾ, ನನ್ನ ಮಗನ ಸಾವು ಅಸಹಜ ಸಾವಾಗಿದೆ. ಸಿಬಿಐಗೆ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದೆ. ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ. ನನ್ನ ಮಗ ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿತ್ತು. ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇದೆ. ಹೀಗಾಗಿ ಪ್ರಕರಣವನ್ನು ಸಿಬಿಐ ಮರು ತನಿಖೆಗೆ ಆದೇಶ ನೀಡಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಾವನ್ನಪ್ಪುವ ಮೊದಲು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳಿದ್ದ ಮೇಸ್ತಾ – ಸಿಬಿಐ ವರದಿಯಲ್ಲಿ ಬಯಲು
Advertisement
Advertisement
Advertisement
ಕಮಾಲಾಕರ್ ಮೆಸ್ತಾ ಅವರ ಮನವಿಯನ್ನು ಆಲಿಸಿದ ಬೊಮ್ಮಾಯಿ, ತಂದೆಯಾಗಿ ನಿಮ್ಮ ಕಷ್ಟ ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಮುಂದಾದ ಸರ್ಕಾರ