ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ್ ಮೇಸ್ತಾ(19) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದು, ಈ ಹಿಂದೆ ಹೊನ್ನಾವರದ ಗುಡ್ ಲಕ್ ಹೋಟೆಲ್ ಮಾಲೀಕ ಆಜಾದ್ ಅಣ್ಣಿಗೇರಿಯನ್ನು ಮೊದಲು ಬಂಧಿಸಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಲೀಂ ಶೇಖ್ ಎಂಬವನನ್ನು ಇದೇ ಶುಕ್ರವಾರ ಬಂಧಿಸಿದ್ದು, ಇದೀಗ ಹೊನ್ನಾವರದ ಕಟ್ಟಿಗೆ ಡಿಪೋದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಆಸೀಫ್ ರಫೀಕ್ ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: Exclusive: ವಿಷವುಣಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ – ಪರೇಶ್ ಮೇಸ್ತಾ ತಂದೆ ಹೇಳಿಕೆ
Advertisement
Advertisement
ಇನ್ನು ಉಳಿದ ಆರೋಪಿಗಳಾದ ಮಹ್ಮದ್ ಫೈಸಲ್ ಅಣ್ಣಿಗೇರಿ, ಇಮ್ತಿಯಾಜ್ ಗನಿ ಎಂಬವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತಾ ಸಾವು: ವೈದ್ಯರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ
Advertisement
ಸಿಬಿಐ ತನಿಖೆ ಪ್ರಾರಂಭವಾಗುವ ಮುನ್ನವೇ ಕಮಲಾಕರ್ ಮೇಸ್ತಾ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಪರೇಶ್ ಮೇಸ್ತಾ ಸಾವು ಸಹಜ ಸಾವಲ್ಲ. ಇದೊಂದು ಕೊಲೆ ಎನ್ನುವ ಆರೋಪಕ್ಕೆ ಹೆಚ್ಚಿನ ಮಹತ್ವ ಬಂದಿದ್ದು ಆರೋಪಿಗಳ ತನಿಖೆಯಲ್ಲಿ ಮತ್ತಷ್ಟು ವಿಷಯಗಳು ಹೊರಬರುವ ಸಾಧ್ಯತೆಯಿದೆ.
Advertisement
ಹೊನ್ನಾವರದಲ್ಲಿ ಡಿಸೆಂಬರ್ 6ರಂದು ನಾಪತ್ತೆಯಾಗಿದ್ದ ಪರೇಸ್ ಮೇಸ್ತಾ ನಗರದ ಶಟ್ಟಿಕೆರೆಯಲ್ಲಿ ಡಿಸೆಂಬರ್ 8 ರಂದು ಹೆಣವಾಗಿ ಪತ್ತೆಯಾಗಿದ್ದ. ನಿಗೂಢ ಸಾವಿನ ಕುರಿತು ತಂದೆ ಕಮಲಾಕರ್ ಮೇಸ್ತಾ ರವರು ಶವ ಪತ್ತೆಯಾದ ಡಿಸೆಂಬರ್ 8 ರಂದೇ ಐದು ಮಂದಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು. ದೂರು ನೀಡಿದ ಬಳಿಕ ಐದು ಮಂದಿ ನಾಪತ್ತೆಯಾಗಿದ್ದರು. ಇದನ್ನೂ ಓದಿ: ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ
ಪರೇಶ್ ಮೆಸ್ತಾ ಸಾವು ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದ್ದಲ್ಲದೇ ಹಲವು ಭಾಗದಲ್ಲಿ ಘರ್ಷಣೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ನೀಡಿತ್ತು. ಇದನ್ನೂ ಓದಿ: ಪರೇಶ್ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಈ ಕುರಿತು ಅಂದು ಪಬ್ಲಿಕ್ ಟಿವಿ ಜೊತೆಗೆ ಮಾತಾಡಿದ ತಂದೆ ಕಮಲಾಕರ್ ಮೇಸ್ತಾ, ನನ್ನ ಮಗನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ. ವಿಷವುಣಿಸಿ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಆದ್ರೆ ಕಾಲು ಜಾರಿ ಬಿದ್ದು ಸತ್ತಿದ್ದಾನೆಂಬ ಪೊಲೀಸರ ಹೇಳಿಕೆ ನೀಡಿದ್ದು, ಇದು ಸರಿಯಲ್ಲ. ನಮ್ಮ ಮಗನಿಗೆ ಈಜು ಬರುತ್ತಿತ್ತು ತಂದೆ ಹೇಳಿದ್ದರು.
ನನ್ನ ಮಗ 6ನೇ ತಾರೀಖು ಕಾಣೆಯಾದ. ಎಲ್ಲಾ ಕಡೆ ಹುಡುಕಿ ನಂತರ ಪೊಲೀಸರಿಗೆ ದೂರು ಕೊಟ್ಟಿದ್ವಿ. ನಂತರ ಶನೀಶ್ವರ ದೇವಸ್ಥಾನದ ಹಿಂದೆ ಶೆಟ್ಟಿ ಕೆರೆಯಲ್ಲಿ ಮಗನ ಶವ ತೇಲುತ್ತಿತ್ತು. ಮುಖ ನೋಡಿದಾಗ ಕಪ್ಪಾಗಿದ್ದು, ಮುಖ ಜಜ್ಜಿತ್ತು, ಕಣ್ಣು ಗೆಡ್ಡೆ ಕಿತ್ತು ಬಂದಿತ್ತು. ಕಿಡ್ನಾಪ್ ಮಾಡಿ ಸಾಯಿಸಿರೋದು ನೂರಕ್ಕೆ ನೂರು ಸತ್ಯ. ಇದಕ್ಕೆ ಪೊಲೀಸ್ ಇಲಾಖೆಯ ಕುಮ್ಮಕ್ಕೂ ಇದೆ. ನನ್ನ ಮಗನಿಗೆ ನ್ಯಾಯ ಸಿಗಬೇಕು. ಪ್ರಕರಣದ ತನಿಖೆಯನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿದ್ದರು. ಇದನ್ನೂ ಓದಿ:ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ
ಪ್ರಕರಣದ ಸಾವಿನ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ನೀಡಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯ ಶಂಕರ್ ಒಕ್ಕಣ್ಣನವರ್ ಸುಳ್ಳು ವರದಿ ಕೊಟ್ಟಿದ್ದಾರೆಂದು ಅಸಮಾಧಾನ ವ್ಯಕ್ತವಾಗಿದ್ದು, ಹೀಗಾಗಿ ಅವರ ವಿರುದ್ಧ ಮೇಲೆ ಫೇಸ್ ಬುಕ್- ವಾಟ್ಸಪ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
https://www.youtube.com/watch?v=5XVX-SyTRAI