ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು 2024ನೇ ಸಾಲಿನ ಪರೀಕ್ಷಾ ಪೇ ಚರ್ಚಾ (Pariksha Pe Charcha 2024) ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ಚರ್ಚಾ ಕಾರ್ಯಕ್ರಮದಲ್ಲಿ ಹತ್ತು-ಹಲವು ಸಲಹೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಗೊಂದಲ ನಿವಾರಿಸುವ ಪ್ರಯತ್ನ ಮಾಡಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅನುಕೂಲಕರ ಸಲಹೆಗಳನ್ನು ನೀಡಿದ್ದಾರೆ.
Advertisement
ವಿದ್ಯಾರ್ಥಿಗಳು – ಶಿಕ್ಷಕರಿಗೆ ಮೋದಿ ಟಾಪ್-10 ಟಿಪ್ಸ್:
* ಹೆಚ್ಚಿನ ವಿದ್ಯಾರ್ಥಿಗಳು (Students) ಪರೀಕ್ಷೆಗೆ ಓದಿಕೊಂಡು ಹೋಗ್ತಾರೆ, ಆದ್ರೆ ಬರೆದು ಅಭ್ಯಾಸ ಮಾಡಿರುವುದಿಲ್ಲ. ಹಾಗಾಗಿ, ಎಷ್ಟೇ ಓದಿದರೂ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆಯಲು ಆಗುವುದಿಲ್ಲ. ಆದ್ದರಿಂದ ಪರೀಕ್ಷೆಗೂ ಮುನ್ನ ಪ್ರಶ್ನೆಗಳಿಗೆ ಉತ್ತರ ಬರೆದು ಅಭ್ಯಾಸ ಮಾಡಿಕೊಳ್ಳಿ. ಆಗ ಮನನವೂ ಆಗುತ್ತದೆ, ಪರೀಕ್ಷೆಯಲ್ಲಿ ಸುಲಭವಾಗಿ ಬರೆಯಲು ಸಾಧ್ಯವಾಗುತ್ತದೆ.
Advertisement
* ತರಗತಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ (Teachers) ನಡುವಿನ ಸಂಬಂಧ ಉತ್ತಮವಾಗಿರಬೇಕು. ಯಾವುದೇ ಸಮಸ್ಯೆಗಳಿದ್ದರೂ ಶಿಕ್ಷಕರೊಂದಿಗೆ ಮುಕ್ತವಾಗಿ ಚರ್ಚಿಸುವಂತಿರಬೇಕು. ಶಿಕ್ಷಕರೂ ಅಷ್ಟೇ ಚೆನ್ನಾಗಿ ವಿದ್ಯಾರ್ಥಿಗಳ ಸಮಸ್ತೆ ಆಲಿಸಿದಾಗ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ವಿದ್ಯಾರ್ಥಿಗಳು ಮುನ್ನಡೆಯುತ್ತಾರೆ.
Advertisement
Advertisement
* ವಿದ್ಯಾರ್ಥಿಗಳ ಮೇಲಿನ ಒತ್ತಡ ಹೇಗೆ ಹೋಗಲಾಡಿಸಬೇಕು ಅನ್ನೋದು ಶಿಕ್ಷಕರ ಮನಸ್ಸಿಗೆ ಮೊದಲೇ ಬರಬೇಕು. ವಿದ್ಯಾರ್ಥಿ ಜೊತೆಗಿನ ಸಂಬಂಧವು ಆರಂಭದ ದಿನದಿಂದ ಪರೀಕ್ಷೆ ದಿನದವರೆಗೂ ಬೆಳೆಯುತ್ತಲೇ ಇರಬೇಕು. ಆಗ ವಿದ್ಯಾರ್ಥಿ ಪುಸ್ತಕ ಮೀರಿ ಬೆಳೆಯುತ್ತಾನೆ.
* ಪರೀಕ್ಷೆಯ ಕೊಠಡಿಗೆ ಮೊದಲೇ ತೆರಳಬೇಕು. ಕೊಠಡಿಯ ಬಾಗಿಲಿನವರೆಗೆ ಪುಸ್ತಕ ಹಿಡಿದುಕೊಂಡು ಹೋಗಬಾರದು. 10 ನಿಮಿಷ ಮೊದಲೇ ಪರೀಕ್ಷಾ ಕೇಂದ್ರಕ್ಕೆ ತೆರಳಿ. ಗೆಳೆಯರೊಂದಿಗೆ ಮಾತನಾಡಿ, ಒಂದು ಜೋಕ್ ಹೇಳಿ, ಮೊದಲು ನಿರಾತಂಕವಾಗಿ ಉಸಿರಾಡಿ.
* ಕೊಠಡಿಯಲ್ಲಿ ಪ್ರಶ್ನೆಪತ್ರಿಕೆ ಸಿಕ್ಕ ತಕ್ಷಣ ಗಾಬರಿಯಾಗದೇ ಎಲ್ಲ ಪ್ರಶ್ನೆಗಳನ್ನು ಓದಿಕೊಳ್ಳಿ. ಯಾವ ಪ್ರಶ್ನೆಗೆ ಹೆಚ್ಚು ಸಮಯ ಬೇಕಾಗುತ್ತದೆ ಎಂಬುದನ್ನು ಯೋಚಿಸಿ. ಪರೀಕ್ಷೆ ಬರೆಯುವಾಗ ಅನಗತ್ಯವಾಗಿ ಗಡಿಯಾರ ನೋಡಿಕೊಳ್ಳಬೇಡಿ.
* ಹಳೆಯ ಪ್ರಶ್ನೆಪತ್ರಿಕೆಗಳಿಗೆ, ಪ್ರಶ್ನೆಗಳಿಗೆ ಉತ್ತರ ಬರೆದು, ನೋಟ್ಸ್‌ಗಳನ್ನು ಮಾಡಿಕೊಂಡು ಪರೀಕ್ಷೆಗೆ ತಯಾರಾಗಿ. ಬರೆದು ಅಭ್ಯಾಸ ಮಾಡಿಕೊಂಡರೆ, ಮನನ ಮಾಡಿಕೊಂಡರೆ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಬಹುದು.
* ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೆದುಳು, ಮನಸ್ಸಿನ ಜತೆಗೆ ದೇಹಕ್ಕೂ ಸ್ವಲ್ಪ ವಿಶ್ರಾಂತಿ ಕೊಡಬೇಕು. ಉಲ್ಲಾಸದ ಸಮಯಗಳನ್ನು ಕಳೆಯುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು.
* ಒಂದೇ ಕಡೆ ಕೂರುವುದಕ್ಕಿಂತ ಶಾಂತ ವಾತಾವರಣ, ಎಳೆ ಬಿಸಿಲಿನ ವಾತಾವರಣಗಳಲ್ಲಿಯೂ ಕುಳಿತು, ಓದಬೇಕು. ಓದುತ್ತೇವೆ ಅಂತ ನಿದ್ರೆಗೆ ಜಾರಬಾರದು.
* ಪರೀಕ್ಷೆಯ ದಿನಗಳಲ್ಲಿ ನಿಯಮಿತ ಆಹಾರ ಸೇವಿಸಬೇಕು. ಬಡತನ ಇರಲಿ, ಸಿರಿತನ ಇರಲಿ, ಇರುವ ಆಹಾರ ಸೇವಿಸಿ. ಸರಿಯಾದ ಸಮಯಕ್ಕೆ ಊಟ ಮಾಡಿ, ಆರೋಗ್ಯ ಕಾಪಾಡಿಕೊಳ್ಳಬೇಕು.
* ಬೆಳಗ್ಗೆ ನಿತ್ಯ ಕರ್ಮಗಳನ್ನು ಮುಗಿಸಿ, 10 ನಿಮಿಷವಾದ್ರೂ ವ್ಯಾಯಾಮ ಮಾಡಬೇಕು. ಸಾಧ್ಯವಾದ್ರೆ ಒಂದಷ್ಟು ನಿಮಿಗಳ ಕಾಲ ಧ್ಯಾನ ಮಾಡಬೇಕು. ಇದರಿಂದ ಮೆದುಳಿನ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು.