ಪ್ಯಾರಿಸ್: ಉಕ್ರೇನ್ ಮೇಲೆ ಆಕ್ರಮಣ ನಡೆಸುತ್ತಿರುವ ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಪಾಶ್ಚಾತ್ಯ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್‌ನಲ್ಲಿ ಉಕ್ರೇನ್ ರಾಷ್ಟ್ರೀಯ ವರ್ಣವನ್ನು ವಿದ್ಯುತ್ ದೀಪಾಲಂಕಾರದಿಂದ ಬೆಳಗಿಸುವ ಮೂಲಕ ರಷ್ಯಾ ಯುದ್ಧವನ್ನು ಫ್ರಾನ್ಸ್ ವಿರೋಧಿಸಿದೆ.
ಪ್ಯಾರಿಸ್ ಮೇಯರ್ ಆನ್ನೆ ಹಿಡಾಲ್ಗೊ ಅವರ ಕೋರಿಕೆಯ ಮೇರೆಗೆ ಐಫೆಲ್ ಟವರ್ ಶುಕ್ರವಾರ ಉಕ್ರೇನ್‌ನ ರಾಷ್ಟ್ರೀಯ ನೀಲಿ ಮತ್ತು ಹಳದಿ ಬಣ್ಣಗಳಲ್ಲಿ ಬೆಳಗಿತು. ರಷ್ಯಾದ ದಾಳಿಯ ಹಿನ್ನೆಲೆಯಲ್ಲಿ ಉಕ್ರೇನ್ ಜನರೊಂದಿಗೆ ಒಗ್ಗಟ್ಟನ್ನು ಸೂಚಿಸುವ ಸಂಕೇತ ಇದು ಎಂದು ಮೇಯರ್ ತಿಳಿಸಿದ್ದಾರೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ
Advertisement
Advertisement
ರಷ್ಯಾ ಸೇನಾ ಪಡೆ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್ ಪ್ರವೇಶಿಸಿದ್ದು, ಗಗನಚುಂಬಿ ಕಟ್ಟಡಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯಿಂದಾಗಿ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಎಲ್ಲರೂ ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.
Advertisement
ಉಕ್ರೇನ್ ಮಿಲಿಟರಿ ಮೇಲೆ ನಿಯಂತ್ರಣ ಸಾಧಿಸಲು ಈ ಯುದ್ಧ ನಡೆಸಲಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. ಆದರೆ ಪುಟಿನ್ ನಿರ್ಧಾರಕ್ಕೆ ಅಮೆರಿಕ ಸೇರಿ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: ಯುದ್ಧ ಬೇಡ: ತನ್ನ ದೇಶಕ್ಕೆ ರಷ್ಯಾ ಟೆನಿಸ್ ತಾರೆ ಮನವಿ
Advertisement
ಉಕ್ರೇನ್ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಇಬ್ಬರೊಂದಿಗೂ ಮಾತುಕತೆ ನಡೆಸಿದ್ದಾರೆ.