ಪ್ಯಾರಿಸ್: ಬ್ಯಾಡ್ಮಿಂಟನ್‌ನಲ್ಲಿ ಮೊಟ್ಟಮೊದಲ ಒಲಿಂಪಿಕ್ ಚಿನ್ನದ ಪದಕ ಜಯಿಸುವ ಭಾರತದ ಕನಸು ಲಕ್ಷ್ಯ ಸೇನ್ (Lakshya Sen) ಸೋಲಿನೊಂದಿಗೆ ನುಚ್ಚು ನೂರಾಯಿತು.
ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ವಿಕ್ಟರ್ ಅಕ್ಸೆಲ್‌ಸೆನ್ ವಿರುದ್ಧ ಲಕ್ಷ್ಯ ಸೇನ್ ನೇರ ಗೋಮ್‌ನಲ್ಲಿ ಸೋಲನುಭವಿಸಿದರು. ಇದನ್ನೂ ಓದಿ: Paris Olympics: ಹಾಕಿಯಲ್ಲಿ ಗ್ರೇಟ್ ಬ್ರಿಟನ್ ಮಣಿಸಿ ಸೆಮಿಫೈನಲ್‌ಗೆ ಭಾರತ ಲಗ್ಗೆ
Advertisement
Advertisement
ಕಂಚಿನ ಪದಕ ಗೆಲ್ಲಲು ಸೇನ್‌ಗೆ ಮತ್ತೊಂದು ಅವಕಾಶ ಇದೆ. ಪ್ಲೇಆಫ್‌ನಲ್ಲಿ ಮಲೇಷ್ಯಾದ ಲೀ ಝಿ ಜಿಯಾ ವಿರುದ್ಧ ಸೆಣಸಲಿದ್ದಾರೆ. ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಪುರುಷ ಷಟ್ಲರ್ ಆಗಲು ಸೇನ್‌ಗೆ ಅವಕಾಶವೊಂದಿದೆ.
Advertisement
54 ನಿಮಿಷಗಳ ಸೆಮಿಫೈನಲ್ ಹಣಾಗಣಿಯಲ್ಲಿ ಎರಡು ಬಾರಿಯ ವಿಶ್ವ ಚಾಂಪಿಯನ್ ಅಕ್ಸೆಲ್‌ಸೆನ್ ವಿರುದ್ಧ ಸೇನ್ 20-22, 14-21 ನೇರ ಸೆಟ್‌ಗಳ ಸೋಲು ಅನುಭವಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಹೆಮ್ಮೆ – ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ
Advertisement
ರಿಯೊ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಬೆಳ್ಳಿ ಮತ್ತು ಕಂಚು ಹಾಗೂ ಲಂಡನ್ ಗೇಮ್ಸ್‌ನಲ್ಲಿ ಸೈನಾ ನೆಹ್ವಾಲ್ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಭಾರತವು ಬ್ಯಾಡ್ಮಿಂಟನ್‌ನಲ್ಲಿ ಒಲಿಂಪಿಕ್ ಚಿನ್ನದ ಪದಕವನ್ನು ಇದುವರೆಗೂ ಗೆದ್ದಿಲ್ಲ.