ನವದೆಹಲಿ: ಭಾರತದ ಸ್ಟಾರ್ ರೆಸ್ಲರ್ ವಿನೇಶ್ ಫೋಗಟ್ (Vinesh Phogat) ಭಾರತಕ್ಕೆ ವಾಪಸ್ ಆಗಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಫೋಗಟ್‌ಗೆ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ.
ಅಭಿಮಾನಿಗಳನ್ನು ನೋಡಿ ಫೋಗಟ್ ಭಾವೋದ್ವೇಗಕ್ಕೆ ಒಳಗಾದರು. ಫೋಗಟ್ ಕಣ್ಣಲ್ಲಿ ನೀರು ಉಕ್ಕಿತ್ತು. ಕಾಂಗ್ರೆಸ್ ಸಂಸದ ದೀಪಿಂದರ್ ಹೂಡಾ, ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸಂತೈಸುವ ಕೆಲಸ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ತಮ್ಮ ಸ್ವಗ್ರಾಮಕ್ಕೆ ತೆರಳಿದರು.
Advertisement
विश्वविजेता पहलवानों को अपने दाव से परास्त कर लौटी देश की बेटी और हरियाणा की शेरनी, विनेश फोगाट का भारत में स्वागत एवं अभिनंदन।
आम तौर पर रक्षाबंधन पर भाई बहन को तोहफा देता है, मगर आपने तो हम सभी हिंदुस्तानियों की छाती गर्व से चौड़ी कर दी।
आप अपने जीवन का हर दंगल यूं ही जीतते… pic.twitter.com/TeLlZzJNK5
— Deepender S Hooda (@DeependerSHooda) August 17, 2024
Advertisement
ವಿನೇಶ್ ಫೋಗಟ್ ಬೆಂಬಲಕ್ಕೆ ಭಾರತದ ಕುಸ್ತಿ ಫೆಡರೇಷನ್ ನಿಲ್ಲಲಿಲ್ಲ ಎಂದು ಫೋಗಟ್ ಪತಿ ಸೋಮ್‌ವೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್, ಅಭಿಮಾನಿಗಳ ಮೆಚ್ಚುಗೆ
Advertisement
ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿಸಿತ್ತು.
Advertisement
ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು.ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು.
आज बहादुर योद्धा की तरह स्वदेश लौटीं देश की बेटी हमारी बहन विनेश फोगाट का दिल्ली एयरपोर्ट पर जोरदार स्वागत किया।
हम सबकी नजरों में पहले भी आप विजेता रही हैं और आगे भी रहेंगी। आपकी हिम्मत, संघर्ष और हौसले ने न सिर्फ करोड़ों देशवासियों का दिल भी जीता है बल्कि आप देश के करोड़ों… pic.twitter.com/PzTLv5o7oX
— Deepender S Hooda (@DeependerSHooda) August 17, 2024
ಫೈನಲ್ ಪಂದ್ಯದ ಮುನ್ನಾದಿನ ನಾನು ಮೂರು ಪಂದ್ಯವನ್ನು ಆಡಿದ್ದೇನೆ. ಆ ದಿನ ನಿಗದಿತ 50 ಕೆಜಿ ತೂಕದ ಮಿತಿಯಲ್ಲಿ ಇದ್ದ ಕಾರಣ ಜಂಟಿಯಾಗಿ ಬೆಳ್ಳಿ ಪದಕದ ಗೌರವ ನೀಡಬೇಕೆಂದು ಮನವಿ ಮಾಡಿದ್ದರು. ವಿನೇಶ್ ಫೋಗಟ್ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.