ಬೆಂಗಳೂರು: ಕಾರ್‌ಗಳನ್ನು ಮನೆಯ ಮುಂದೆ ಪಾರ್ಕ್ (Parking) ಮಾಡಿದ್ದಕ್ಕೆ ಮುಖ್ಯಮಂತ್ರಿ (CM) ಸಿದ್ದಾರಾಮಯ್ಯ (Siddaramaiah) ಅವರ ನಿವಾಸದ ಎದುರು ಮನೆ ವ್ಯಕ್ತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರುಗಳನ್ನು ಮನೆಯ ಮುಂದೆ ನಿಲ್ಲಿಸುವುದರಿಂದ ತೊಂದರೆಯಾಗುತ್ತಿದೆ ಎಂದು ವ್ಯಕ್ತಿ ಗರಂ ಆಗಿದ್ದಾರೆ. ಅಲ್ಲದೇ ಪೊಲೀಸರ ವಿರುದ್ಧ ಸಹ ವ್ಯಕ್ತಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಸಿಎಂಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಸಿಎಂ ಮನೆಯಲ್ಲಿದ್ದ ಪೊಲೀಸರು ಕೂಡಲೇ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಆಕ್ರೋಶಗೊಂಡಿದ್ದ ವ್ಯಕ್ತಿಯನ್ನು ಸಮಾಧಾನ ಮಾಡಿ ಕಳಿಸಿದ್ದಾರೆ. ಇದನ್ನೂ ಓದಿ: ಯುವತಿಯ ಸ್ನಾನದ ವೀಡಿಯೋ ಮಾಡಲು ಹೋಗಿ ಪೊಲೀಸರ ಅತಿಥಿಯಾದ ಯುವಕ!
ಈ ಹಿಂದೆ ಸಹ ವಾಹನಗಳನ್ನು ನಿಲ್ಲಿಸಿದ್ದಕ್ಕೆ ವ್ಯಕ್ತಿ ಅಸಮಾಧಾನಗೊಂಡಿದ್ದರು. ಅಲ್ಲದೇ ಒಂದು ಬಾರಿ ಸಿದ್ದರಾಮಯ್ಯ ಅವರ ಕಾರನ್ನು ಅಡ್ಡ ಹಾಕಿದ್ದರು. ಈ ವೇಳೆ ಮನೆಯ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಾರೆ. ಸಿಎಂ ಭೇಟಿಗೆ ಬರುವ ವಾಹನಗಳು ನಮ್ಮ ಮನೆ ಮುಂದೆ ನಿಲ್ಲಿಸಿ ಹೋಗುತ್ತಾರೆ. ವಾಹನಗಳನ್ನು ಹೇಗೆ ಬೇಕೋ ಹಾಗೆ ಪಾರ್ಕ್ ಮಾಡಿ ಹೋಗುತ್ತಾರೆ. ಪೊಲೀಸರಿಗೆ ಹೇಳಿದರೂ ಪ್ರಯೋಜವಾಗಿಲ್ಲ ಎಂದು ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.
ಪದೇ ಪದೇ ಸಿಎಂ ನಿವಾಸದ ಎದುರಿನ ಮನೆಯ ವ್ಯಕ್ತಿಯ ಆಕ್ರೋಶದಿಂದ ಪೊಲೀಸರು (Police) ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ
Web Stories