ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೋ ಬೇಡವೋ ಎನ್ನುವ ನಿರ್ಧಾರ ಸಂಸತ್ತಿನ ಅಧಿಕಾರಕ್ಕೆ ಬಿಟ್ಟದ್ದು. ಸಂಸತ್ತು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ತಿಳಿಸಿದೆ.
ಕಾವೇರಿ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ನಿರ್ವಹಣಾ ಮಂಡಳಿ ರಚನೆ ಬಗ್ಗೆ ಕೇಂದ್ರ ತನ್ನ ನಿಲುವು ಸ್ಪಷ್ಟಪಡಿಸಿದೆ. ನಿರ್ವಹಣಾ ಮಂಡಳಿ ರಚನೆ ನ್ಯಾಯಾಧಿಕರಣದ ವ್ಯಾಪ್ತಿಗೆ ಬರುವುದಿಲ್ಲ. ಸರ್ಕಾರ ಈ ಬಗ್ಗೆ ಕರಡು ಸಿದ್ಧಪಡಿಸಿ ಸಂಸತ್ತಿನ ಮುಂದಿಡಲಿದೆ. ಇದಕ್ಕೆ ತಿದ್ದುಪಡಿ, ಬದಲಾವಣೆ ಮಾಡುವುದಿದ್ದರೆ ಸಂಸತ್ತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದೆ.
Advertisement
ಒಂದು ವೇಳೆ ಸುಪ್ರೀಂಕೋರ್ಟ್ ನೀರು ಹಂಚಿಕೆ, ಮಂಡಳಿ ರಚನೆ ಬಗ್ಗೆ ತೀರ್ಪು ನೀಡಿದರೆ ನಾವು ಅದನ್ನ ಪಾಲಿಸುತ್ತೇವೆ ಎಂದು ಕೇಂದ್ರ ಸರ್ಕಾರದ ವಕೀಲ ರಂಜಿತ್ ಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನಾವು ತೀರ್ಪು ನೀಡಿದರೆ ನೀವು ಪಾಲಿಸಲೇಬೇಕು ಎಂದು ಸೂಚಿಸಿದ್ದಾರೆ.