ನವದೆಹಲಿ: ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್ ಮಾಸ್ಟರ್ಸ್ ಮತ್ತು ಸಂಸತ್ತಿಗಿಂತಲೂ ಮೇಲೆ ಯಾರಿಗೂ ಅಧಿಕಾರವಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Jagdeep Dhankhar) ಮತ್ತೊಮ್ಮೆ ಸುಪ್ರೀಂಕೋರ್ಟ್ (Suprme Court) ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಗಳ ಮೂಲಕ ಕೆಲವೊಮ್ಮೆ ತೀವ್ರವಾಗಿ ಹೊಣೆಗಾರರಾಗಿರುತ್ತಾರೆ. ತುರ್ತು ಪರಿಸ್ಥಿತಿಯನ್ನು ವಿಧಿಸಿದ್ದಕ್ಕೆ ಪ್ರಧಾನ ಮಂತ್ರಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿತ್ತು. ಪ್ರಜಾಪ್ರಭುತ್ವವು ಜನರಿಗೆ ಮತ್ತು ಚುನಾಯಿತ ಪ್ರತಿನಿಧಿಗಳ ರಕ್ಷಣೆಯ ಭಂಡಾರವಾಗಿದೆ ಎಂದು ಅಭಿಪ್ರಾಯಪಟ್ಟರು
ಸಂಸತ್ತನ್ನು ಮೀರಿದ ಅಧಿಕಾರದ ಬಗ್ಗೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖವಿಲ್ಲ. ಸಂಸತ್ತು ಸರ್ವೋಚ್ಚ. ಅದು ದೇಶದ ಪ್ರತಿಯೊಬ್ಬ ವ್ಯಕ್ತಿಯಂತೆ ಸರ್ವೋಚ್ಚವಾಗಿದೆ ಎಂದು ಹೇಳಿದರು.
ಧನಕರ್ ಅವರು ಈ ರೀತಿಯಾಗಿ ಹೇಳುತ್ತಿರುವುದು ಎರಡನೇ ಬಾರಿ. ಈ ಹಿಂದೆ ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್ ಆಗಬಾರದು. ಈಗ ಕಾರ್ಯಾಂಗ ಮತ್ತು ಶಾಸಕಾಂಗದ ಜಾಗದಲ್ಲಿ ನ್ಯಾಯಾಂಗದ ಪ್ರವೇಶವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ: ಸುಪ್ರೀಂ ಕೋರ್ಟ್
ನ್ಯಾಯಾಧೀಶರು ಭಾರತದ ರಾಷ್ಟ್ರಪತಿಗಳಿಗೆ ನಿರ್ದೇಶಿಸುವ ಪರಿಸ್ಥಿತಿಯನ್ನು ನಾವು ಹೊಂದಲು ಸಾಧ್ಯವಿಲ್ಲ. ಈ ರೀತಿಯ ನಿರ್ದೇಶನವು ರಾಷ್ಟ್ರದ ಅತ್ಯುನ್ನತ ಕಚೇರಿಯ ಸಾಂವಿಧಾನಿಕ ಅಧಿಕಾರವನ್ನು ದುರ್ಬಲಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.
ಏನಿದು ಕೇಸ್?
ಶಾಸನಸಭೆ ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕುವ ವಿಚಾರವಾಗಿ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಅಧಿಕಾರಕ್ಕೆ ಸುಪ್ರೀಂ ಕೋರ್ಟ್ (Suprme Court) ಡೆಡ್‌ಲೈನ್ ವಿಧಿಸಿ ತೀರ್ಪು ಪ್ರಕಟಿಸಿತ್ತು. ಪರಿಶೀಲನೆಗಾಗಿ ರಾಜ್ಯಪಾಲರಿಂದ ಬಂದ ಮಸೂದೆಗಳ ವಿಚಾರವಾಗಿ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಯವರಿಗೆ ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿ ಮಾಡಿ ಏಪ್ರಿಲ್ 8 ರಂದು ಆದೇಶ ಪ್ರಕಟಿಸಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಕಾನೂನು ಮಾಡಿದ್ರೆ ಸಂಸತ್ತು ಭವನವನ್ನು ಮುಚ್ಚಬೇಕು: ಬಿಜೆಪಿ ಎಂಪಿ ನಿಶಿಕಾಂತ್ ದುಬೆ
ರಾಜ್ಯಪಾಲರು ರಾಷ್ಟ್ರಪತಿಯವರ ಪರಿಶೀಲನೆಗಾಗಿ ಯಾವ ದಿನಾಂಕಕ್ಕೆ ಮಸೂದೆಯನ್ನು ಕಳುಹಿಸಲಾಗಿತ್ತೋ, ಆ ದಿನಾಂಕದಿಂದ ಅನ್ವಯವಾಗುವಂತೆ ಮೂರು ತಿಂಗಳ ಅವಧಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೋರ್ಟ್ ರಾಷ್ಟ್ರಪತಿಯವರಿಗೆ ಹೇಳಿರುವುದು ಇದೇ ಮೊದಲು. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ಅವರನ್ನೊಳಗೊಂಡ ಪೀಠವು ತಮಿಳುನಾಡು ರಾಜ್ಯ ಸರ್ಕಾರ vs ರಾಜ್ಯಪಾಲ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ಪ್ರಕಟಿಸಿತ್ತು.