ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

Public TV
2 Min Read
Waqf 01

– ಜೆಪಿಸಿ ಮುಖ್ಯಸ್ಥರ ವಿರುದ್ಧ ವಿಪಕ್ಷಗಳ ಸದಸ್ಯರು ಗರಂ

ನವದೆಹಲಿ: ಸಂಸತ್ತಿನ ಜಂಟಿ ಸಮಿತಿಯು (JPC ) ವಕ್ಫ್ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ.

ಈ ಮಸೂದೆಯನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನಲ್ಲಿ ಮಂಡಿಸಿದ್ದರು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ (Jagdambika Pal) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ, ವಕ್ಫ್‌ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ – ಡಿಸಿ, ಎಸ್ಪಿಗಳಿಗೆ ಕೃಷ್ಣಬೈರೇಗೌಡ ಸೂಚನೆ

Waqf

ವಿಪಕ್ಷ ಸಂಸದರು ಸೇರಿ ಇತರರು 44 ತಿದ್ದುಪಡಿಗಳಿಗೆ ಸೂಚಿಸಿದ್ರು. ಈ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಜಂಟಿ ಸಂಸದೀಯ ಸಮಿತಿ ಅಂಗೀಕರಿಸಿತು. ಇದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು. ಪ್ರಜಾಪ್ರಭುತ್ವ ಪದ್ದತಿಯಲ್ಲಿ ಜೆಪಿಸಿ ಕೆಲಸ ಮಾಡಿಲ್ಲ ಎಂದು ವಿಪಕ್ಷ ಸದಸ್ಯರು ಗರಂ ಆದರು. ಈ 14 ಪ್ರತಿಪಾದನೆಗಳ ಅನುಮೋದನೆಗೆ ಬುಧವಾರ (ಜ.29) ವೋಟಿಂಗ್ ನಡೆಯಲಿದೆ. ಜನವರಿ 31ಕ್ಕೆ ಅಂತಿಮ ವರದಿಯನ್ನು ಲೋಕಸಭೆಗೆ ಸಲ್ಲಿಸಲು ಜೆಪಿಸಿ ಮುಖ್ಯಸ್ಥರು ತೀರ್ಮಾನಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್, ಎನ್‌ಡಿಎ ಸದಸ್ಯರು ಮಂಡಿಸಿದ 14 ತಿದ್ದುಪಡಿಗಳನ್ನು ಸ್ವೀಕರಿಸಲಾಗಿದೆ. ವಿಪಕ್ಷದ ಸದಸ್ಯರು ಹಲವು ತಿದ್ದುಪಡಿಗಳನ್ನು ಮಂಡಿಸಿದ್ದರಾದರೂ, ಅವೆಲ್ಲವನ್ನೂ ಮತದಾನದ ಮೂಲಕ ತಿರಸ್ಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

ಸಮಿತಿಯು ಅಂಗೀಕರಿಸಿದ ತಿದ್ದುಪಡಿಗಳು ಕಾನೂನನ್ನು ಉತ್ತಮ ಮತ್ತು ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡುತ್ತದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಅಂಗೀಕಾರ ನೀಡುವ ಜೆಪಿಸಿ ಪ್ರಕ್ರಿಯೆಯನ್ನು ಪ್ರಜಾಸತ್ತಾತ್ಮಕ ಎಂದು ಬಣ್ಣಿಸಿರುವ ಜಗದಂಬಿಕಾ ಪಾಲ್‌, ಅಂಗೀಕರಿಸಿದ ತಿದ್ದುಪಡಿಗಳು ಉತ್ತಮ ಮಸೂದೆಯನ್ನು ರೂಪಿಸುತ್ತವೆ ಎಂದು ಬಲವಾಗಿ ನಂಬಿರುವುದಾಗಿ ಹೇಳಿದ್ದಾರೆ.

Share This Article