ನವದೆಹಲಿ: ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ (TMC) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಚಾಟಿಸಲಾಗಿದೆ.
ನೀತಿ ಸಮಿತಿಯ ವರದಿಯನ್ನು ಇಂದು (ಶುಕ್ರವಾರ) ಲೋಕಸಭೆಯಲ್ಲಿ ಮಂಡಿಸಲಾಯಿತು. ವರದಿಯನ್ನು ಆಧರಿಸಿ ಲೋಕಸಭೆಯಿಂದ ಮಹುವಾ ಮೊಯಿತ್ರಾ (Mahua Moitra) ಅವರು ಉಚ್ಚಾಟನೆಗೊಂಡಿದ್ದಾರೆ. ಇದನ್ನೂ ಓದಿ: ಮಹುವಾ ಮೊಯಿತ್ರಾ ಲೋಕಸಭಾ ಸದಸ್ಯತ್ವ ರದ್ದು – ನೈತಿಕ ಸಮಿತಿ ವರದಿಯಲ್ಲಿ ಏನಿದೆ?
Advertisement
#WATCH | Cash for query matter | TMC’s Mahua Moitra expelled as a Member of the Lok Sabha; House adjourned till 11th December.
Speaker Om Birla says, “…This House accepts the conclusions of the Committee that MP Mahua Moitra’s conduct was immoral and indecent as an MP. So, it… pic.twitter.com/mUTKqPVQsG
— ANI (@ANI) December 8, 2023
Advertisement
ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದರು.
Advertisement
ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ವರದಿಯನ್ನು ಬಿಜೆಪಿ ಸಂಸದ ವಿನೋದ್ ಕುಮಾರ್ ಸೋನಕರ್ ನೇತೃತ್ವದ ನೀತಿ ಸಮಿತಿಯು ನ.9 ರಂದು ಅಂಗೀಕರಿಸಿತ್ತು. ಮಹುವಾ ಅವರನ್ನು ಉಚ್ಚಾಟನೆ ಮಾಡಬೇಕಾದರೆ ಈ ಬಗ್ಗೆ ಸರ್ಕಾರ ನಿಲುವಳಿ ಮಂಡಿಸಿ, ಸದನದ ಅಂಗೀಕಾರ ಪಡೆಯಬೇಕಿತ್ತು. ಇದನ್ನೂ ಓದಿ: Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ
Advertisement
#WATCH | TMC MP Mahua Moitra says, “Maa Durga aa gayi hai, ab dekhenge…Jab naash manuj par chhata hai, pehle vivek mar jaata hai. They have started ‘vastraharan’ and now you will watch ‘Mahabharat ka rann’.”
Ethics Panel report on her to be tabled in Lok Sabha today. pic.twitter.com/r28o2ABVbB
— ANI (@ANI) December 8, 2023
ಪ್ರಕರಣ ಸಂಬಂಧ ಶುಕ್ರವಾರ ಬಿರುಸಿನ ಚರ್ಚೆ ಮತ್ತು ಧ್ವನಿ ಮತದ ನಂತರ ಸ್ಪೀಕರ್ ಓಂ ಬಿರ್ಲಾ ಅವರು, ಈ ಸದನವು ಸಮಿತಿಯ ತೀರ್ಮಾನಗಳನ್ನು ಸ್ವೀಕರಿಸುತ್ತದೆ. ಮಹುವಾ ಮೊಯಿತ್ರಾ ಅವರು ಸಂಸದರಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ತಿಳಿಸಿದರು.
ಲೋಕಸಭೆ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸದಸ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗುತ್ತಿದ್ದಂತೆ, ವಿರೋಧ ಪಕ್ಷಗಳ ಸದಸ್ಯರು ಸದನದಿಂದ ಹೊರ ನಡೆದರು.