ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ (Sonia Gandhi) ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ (Rahul Gandhi) ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ರು. ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು
Advertisement
Advertisement
ವಕ್ಫ್ ಮಸೂದೆ ಮಂಡನೆಗೆ ಗಡುವು ವಿಸ್ತರಣೆ ಸಾಧ್ಯತೆ:
ಚಳಿಗಾಲ ಅಧಿವೇಶನದಲ್ಲಿ (Parliament Winter Session) ಈ ಬಾರಿ ವಕ್ಫ್ ಮಸೂದೆ ಮಂಡನೆ ಅಸಾಧ್ಯ ಎಂದು ಹೇಳಲಾಗುತ್ತಿದೆ. ಏಕೆಂದರೆ ವಕ್ಫ್ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸಲು ರಚಿಸಲಾದ ಜಂಟಿ ಸಂಸದೀಯ ಸಮಿತಿ (JPC) ತನ್ನ ವರದಿ ಮಂಡಿಸಲು ನವೆಂಬರ್ 29ರ ವರೆಗೆ ಗಡುವು ವಿಸ್ತರಿಸುವ ಪ್ರಸ್ತಾಪ ಮಂಡಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
Advertisement
Advertisement
ಸಂಸತ್ ಚಳಿಕಾಲದ ಅಧಿವೇಶನವು ಇದೇ ನವೆಂಬರ್ 25ರಿಂದ ಆರಂಭವಾಯಿತು. ಆರಂಭದಲ್ಲೇ ಮಣಿಪುರ ಮತ್ತು ಸಂಭಾಲ್ ಹಿಂಸಾಚಾರ ಪ್ರಕರಣಗಳನ್ನು ಪ್ರಸ್ತಾಪಿಸಿ ವಿಪಕ್ಷಗಳು ಗದ್ದಲ ಎಬ್ಬಿಸಿದವು, ಇದರಿಂದ ಕಲಾಪ ಮುಂದೂಡಲಾಯಿತು, 75ನೇ ಸಂವಿಧಾನ ದಿನಾಚರಣೆ ಅಂಗವಾಗಿ 2ನೇ ದಿನವೂ ಯಾವುದೇ ಸಭೆ ನಡೆಯಲಿಲ್ಲ. 3ನೇ ದಿನ ಎರಡೂ ಸದನಗಳನ್ನು ಒಂದು ಗಂಟೆ ಮುಂದೂಡಲಾಯಿತು. ಇದನ್ನೂ ಓದಿ: ಮೀಸಲಾತಿ ಲಾಭಕ್ಕಾಗಿ ಮರು ಮತಾಂತರ ಆಗೋದು ಸಂವಿಧಾನಕ್ಕೆ ಮಾಡುವ ವಂಚನೆ: ಸುಪ್ರೀಂ
ನಾಲ್ಕನೇ ದಿನವಾದ ಇಂದು ಅಧಿವೇಶನದಲ್ಲಿ ಬಿಜೆಪಿ ಹಲವು ಮಸೂದೆಗಳನ್ನು ಮಂಡಿಸುವ ಸಾಧ್ಯತೆಯಿದೆ. ಮುಖುವಾಗಿ ರೈಲ್ವೆ ಇಲಾಖೆ ಅಧಿಕಾರ ಹಾಗೂ ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸಲು ರೈಲ್ವೆ (ತಿದ್ದುಪಡಿ) ಮಸೂದೆ, 2024 ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 4ನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ಇಂದು ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ